ನವದೆಹಲಿ, ಜ ೨೨ ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ಹಾಗೂ ರಾಷ್ಟ್ರೀ ಯ ಪೌರತ್ವ ನೋಂದಣಿ- ಎನ್ ಆರ್ ಸಿ ಪ್ರಕ್ರಿಯೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ೧೪೪ ಆರ್ಜಿಗಳ ಸಂಬಂಧ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್ , ನಾಲ್ಕು ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.
ಅಲ್ಲದೆ, ಪೌರತ್ವ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಸಾವಿಂಧಾನಿಕ ಪೀಠ ನಡೆಸಬೇಕು ಎಂದು ಮುಖ್ಯನ್ಯಾಯಮೂರ್ತಿ ಎಸ್ . ಎ. ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ. ಆರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ ಪೀಠ, ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಆರ್ಜಿಗಳು ಪ್ರಶ್ನಿಸಿರುವದರಿಂದ ಸಂವಿಧಾನದ ೧೪೫ (೩) ನೇ ವಿಧಿಯಂತೆ ಈ ಅರ್ಜಿಗಳನ್ನು ಐವರು ನ್ಯಾಯಮೂರ್ತಿಗಳ ವಿಸ್ತೃತ ಸಾವಿಂಧಾನಿಕ ಪೀಠಕ್ಕೆ ವರ್ಗಾಯಿಸುವುದಾಗಿ ತಿಳಿಸಿದೆ.