ನವದೆಹಲಿ, ಸೆ 18 ಅಯೋಧ್ಯ ವಿವಾದದ ವಿಚಾರಣೆಯನ್ನು ಶೀಘ್ರವಾಗಿ ನಡೆಸಲು ಎಲ್ಲಾ ಪಕ್ಷಗಳು ತಮ್ಮ ವಾದಗಳನ್ನು ಅಕ್ಟೋಬರ್ 18ರೊಳಗೆ ಮುಗಿಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನವನ್ನು ಬಿಜೆಪಿ ಬುಧವಾರ ಸ್ವಾಗತಿಸಿದೆ.
ಅಯೋಧ್ಯೆಯ ರಾಮ ಮಂದಿರದ ಅಂತಿಮ ತೀರ್ಪಿಗಾಗಿ ಇಡೀ ದೇಶ ಕಾಯುತ್ತಿದೆ. ಈಗಾಗಲೇ ಮಂದಿರವನ್ನು ಟೆಂಟ್ನಲ್ಲಿ ನಿರ್ಮಿಸಲಾಗಿದೆ. ಈಗ ಭವ್ಯ ಮಂದಿರಕ್ಕಾಗಿ ಕಾಯುತ್ತಿದ್ದೇವೆ ಎಂದು ಬಿಜೆಪಿ ವಕ್ತಾರ ಶಹನವಾಜ್ ಹುಸೇನ್ ಸುದ್ದಿಗಾರರಿಗೆ ತಿಳಿಸಿದರು.
ಮಾತುಕತೆಗಳ ಮೂಲಕ ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನ ನಡೆಯುತ್ತಿದೆ, ಆದರೆ ಅದರಿಂದ ಯಾವುದೇ ಫಲಿತಾಂಶ ಬಂದಿಲ್ಲ ಎಂದು ಅವರು ಹೇಳಿದರು.
ನ್ಯಾಯಾಲಯ ಶನಿವಾರ ಕೂಡ ವಿಚಾರಣೆ ನಡೆಸಲು ಸಿದ್ಧವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ ಎಂದವರು ತಿಳಿಸಿದರು.
ಸಮಸ್ಯೆಯನ್ನು ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂಬುದು ನಿಜ ಎಂದು ಅವರು ಹೇಳಿದರು.
ಬಿಜೆಪಿಯ ಮತ್ತೊಬ್ಬ ಮುಖಂಡ ಗಿರಿರಾಜ್ ಸಿಂಗ್ ಕೂಡ ನ್ಯಾಯಾಲಯದ ಕ್ರಮವನ್ನು ಸ್ವಾಗತಿಸಿದ್ದು, ಕೋಟ್ಯಂತರ ಜನರು ರಾಮ ಮಂದಿರಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು
ಅಯೋಧ್ಯೆ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಎಲ್ಲಾ ಪಕ್ಷಗಳು ತಮ್ಮ ವಾದಗಳನ್ನು ಅಕ್ಟೋಬರ್ 18ರೊಳಗೆ ಮುಗಿಸಲು ಗಡುವನ್ನು ಸುಪ್ರೀಂಕೋರ್ಟ್ ನೀಡಿದೆ. ಈ ಗಡುವಿನೊಳಗೆ ವಾದ ಮಂಡಿಸಲು ಮತ್ತು ದಾಖಲೆ ಸಲ್ಲಿಸಲು ಅಗತ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುವಂತೆ ಆಯಾ ಪಕ್ಷಗಳಿಗೆ ಪೀಠ ಸೂಚಿಸಿದೆ.