ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

ನವದೆಹಲಿ, ಡಿ 18 (ಯುಎನ್ಐ) ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಕಾಯ್ದೆಯನ್ನು ಪ್ರಶ್ನಿಸಿರುವ ಎಲ್ಲಾ ಅರ್ಜಿದಾರರಿಗೂ ಬುಧವಾರ ನೋಟಿಸ್ ಜಾರಿ ಮಾಡಿದೆ.   ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ  ನ್ಯಾಯಪೀಠ ಪ್ರತಿವಾದಿಗಳಿಗೆ ಜನವರಿ ಎರಡನೇ ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.   ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಸಂವಿಧಾನದ ಮೂಲವಾಗಿರುವ ಜಾತ್ಯತೀತ ಸಿದ್ಧಾಂತವನ್ನು ಉಲ್ಲಂಘಿಸುತ್ತದೆ ಮತ್ತು ಧರ್ಮಧಾರಿತ ತಾರತಮ್ಯವನ್ನು ಪ್ರಚೋದಿಸುತ್ತದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.   ವಿಚಾರಣೆಯನ್ನು ಜನವರಿ 22ಕ್ಕೆ ಮುಂದೂಡಲಾಗಿದೆ.