ಎಸ್ಸಿ , ಎಸ್ಟಿ ದೌರ್ಜನ್ಯ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ, ಫೆ  10:   ಎಸ್ಸಿ , ಎಸ್ಟಿ ದೌರ್ಜನ್ಯ ತಿದ್ದುಪಡಿ ಕಾಯ್ದೆ 2018 ರ  ಸಿಂಧುತ್ವ ವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಎಸ್ಸಿ , ಎಸ್ಟಿಗಳ ವಿರುದ್ಧದ ದೌರ್ಜನ್ಯದ ಆರೋಪ ಹೊತ್ತಿರುವ ವ್ಯಕ್ತಿಗೆ ನಿರೀಕ್ಷಣಾ ಜಾಮೀನು ನೀಡುವ ಯಾವುದೇ ನಿಬಂಧನೆಯನ್ನು ನ್ಯಾಯಲಯ ನಿರಾಕರಿಸಿದೆ. 

ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠ ಈ ಕಾಯ್ದೆಯಡಿ ಎಫ್ಐಆರ್ ದಾಖಲಿಸುವ ಮೊದಲು ಪ್ರಾಥಮಿಕ ವಿಚಾರಣೆ ಅನಿವಾರ್ಯವಲ್ಲ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಅನುಮತಿಯೂ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಮಾರ್ಚ್ 20, 2018 ರಂದು ಅಂಗೀಕರಿಸಿದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕೇಂದ್ರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿತ್ತು .ಈಗಕೇಂದ್ರಕ್ಕೆ ಒಂದು ರೀತಿ ಹಿನ್ನಡೆಯಾದಂತಿದೆ.