ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯಗಳ ಕಾರ್ಮಿಕರ ಹಿತ ಕಾಯಲು ಸರ್ಕಾರಬದ್ಧ: ಸುರೇಶ್ ಕುಮಾರ್
ಬೆಂಗಳೂರು, ಮೇ 2,ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕೆಲಸವಿಲ್ಲದೇ ಅತಂತ್ರರಾಗಿರುವ ಒಂದು ಸಾವಿರಕ್ಕೂ ಹೆಚ್ಚು ಕಾರ್ಮಿಕರನ್ನು ಇಂದು ಸಚಿವ ಸುರೇಶ್ ಕುಮಾರ್ ಭೇಟಿ ಮಾಡಿದರು. ಯಶವಂತಪುರದ ಎಪಿಎಂಸಿ ಹಾಗೂ ಮಾಗಡಿ ರಸ್ತೆಯ ಕಾವೇರಿಪುರ ಗುಡ್ಡದಲ್ಲಿ ಬಹುವಸತಿ ಸಮುಚ್ಛಯ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರನ್ನು ಭೇಟಿ ಮಾಡಿದ ಸಚಿವರು ಇಷ್ಟರಲ್ಲಿಯೇ ಬೆಂಗಳೂರು ನಗರದಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಬೃಹತ್ ನಿರ್ಮಾಣ ಚಟುವಟಿಕೆಗಳು ಆರಂಭವಾಗುವುದಿದ್ದು, ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಆಗ್ರಹಿಸಿದರು.
ಸರ್ಕಾರವು ತಮ್ಮೆಲ್ಲರ ಹಿತ ಕಾಯಲು ಸದಾ ಬದ್ಧರಾಗಿರುವುದಾಗಿ ಹೇಳಿದ ಸಚಿವ ಸುರೇಶ್ ಕುಮಾರ್, ಕಟ್ಟಡ ಕಾರ್ಮಿಕರ ಮಾಲೀಕರೊಂದಿಗೆ ಸ್ಥಳದಲ್ಲಿಯೇ ಮಾತನಾಡಿ ಎಲ್ಲಾ ಕಾರ್ಮಿಕರಿಗೆ ನೀಡಬೇಕಿರುವ ಬಾಕಿಯನ್ನ ಕೂಡಲೇ ನೀಡಲು ಸೂಚಿಸಿದರಲ್ಲದೇ, ತಕ್ಷಣದಿಂದಲೇ ಕಾಮಗಾರಿಗಳು ಆರಂಭಿಸುವಂತೆ ಎಲ್ಲ ಪೂರ್ವಭಾವಿ ಕ್ರಮಗಳಿಗೆ ಆಗ್ರಹಿಸಿದರು.ಕಾರ್ಮಿಕರಿಗೆ ಆಹಾರ ಧಾನ್ಯಗಳನ್ನು ವಿತರಿಸಿ ಮಾತನಾಡಿದ ಸಚಿವರು, ಬೆಂಗಳೂರು ನಗರದ ಹಲವಾರು ಸ್ಥಳಗಳಲ್ಲಿ ಹೀಗೆ ಹಲವು ದಿನಗಳಿಂದ ನೆಲೆಸಿರುವ, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳ ಸಾವಿರಾರು ಕೂಲಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಆತಂಕದಿಂದ ಸಿದ್ಧರಾಗುತ್ತಿದ್ದು, ಇವರು ಇಲ್ಲಿಯೇ ನೆಲೆಸುವಂತೆ ಸರ್ಕಾರದ ಪರವಾಗಿ ತಾವು ಖುದ್ದಾಗಿ ತೆರಳಿ ಮನವಿ ಮಾಡುತ್ತಿದ್ದು, ಇವರಿಗೆ ನಿರಂತರವಾದ ಕೆಲಸ ದೊರಕಿಸುವಲ್ಲಿ ಕ್ರಿಯಾ ಯೋಜನೆಯನ್ನು ರೂಪಿಸುವ ಬಗ್ಗೆ ತಾವು ಇಂದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಹೇಳಿದರು. ಸಚಿವರೊಂದಿಗೆ ಹಿರಿಯ ಐ ಎ ಎಸ್ ಅಧಿಕಾರಿ ಕುಮಾರ್ ನಾಯಕ್, ಸೇರಿದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 