ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಒಳಗಾದ ಸುರೇಶ್ ರೈನಾ

ಆ್ಯಮಸ್ಟರ್ಡ್ಯಾಮ್, ಆ 10     ಹಿರಿಯ ಬ್ಯಾಟ್ಸ್ಮನ್ ಸುರೇಶ್ ರೈನಾ ಅವರು ಶುಕ್ರವಾರ ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು ಮುಂಬರುವ ದೇಶೀಯ ಆವೃತ್ತಿಯ ಹೆಚ್ಚಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.    

"ಕಳೆದ ಹಲವು ತಿಂಗಳುಗಳಿಂದ ಗಾಯದಿಂದ ಬಳಲುತ್ತಿದ್ದ ಸುರೇಶ್ ರೈನಾ ಅವರು ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಅವರು ಚೇತರಿಸಿಕೊಳ್ಳಲು ನಾಲ್ಕರಿಂದ ಆರು ವಾರಗಳ ಸಮಯ ಅಗತ್ಯವಿದೆ." ಎಂದು ಬಿಸಿಸಿಐ ಟ್ವೀಟ್ ಮಾಡಿದೆ. 

32ರ ಪ್ರಾಯದ ಎಡಗೈ ಬ್ಯಾಟ್ಸ್ಮನ್ 2018ರಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಏಕದಿನ ಪಂದ್ಯವಾಡಿದ್ದರು. 2011ರ ವಿಶ್ವಕಪ್ ವಿಜೇತ ಭಾರತ ತಂಡದಲ್ಲಿ ರೈನಾ ಆಡಿದ್ದರು. 18 ಟೆಸ್ಟ್, 226 ಏಕದಿನ ಹಾಗೂ 78 ಟಿ-20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.