ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪತ್ತೆಗಾಗಿ ಹಠಾತ್ ದಾಳಿ: 17 ಕಿಶೋರಕಾರ್ಮಿಕರ ರಕ್ಷಣೆ
Surprise raids to detect child and adolescent laborers: 17 adolescent laborers rescued
ಲೋಕದರ್ಶನ ವರದಿ
ಧಾರವಾಡ 17: ಕಾರ್ಮಿಕ ಆಯುಕ್ತರು ಹಾಗೂ ಪೋಲಿಸ್ ಇಲಾಖೆಯ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 12, 2026 ರಂದು ಜಿಲ್ಲೆಯಾದ್ಯಂತ ಏಕಕಾಲಕ್ಕೆ ವಿವಿಧ ತಾಲೂಕುಗಳಲ್ಲಿ ದಿಢೀರ್ ತಪಾಸಣೆ ನಡೆಸಿ, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪತ್ತೆಗಾಗಿ ದಾಳಿಗಳನ್ನು ಕೈಗೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಿವಿಧ ಅಂಗಡಿ, ವಾಣಿಜ್ಯ ಸಂಸ್ಥೆಗಳು, ಬೇಕರಿ, ಗ್ಯಾರೆಜ್, ಹೊಟೇಲ್, ಬಾರ್ ಮತ್ತು ರೆಸ್ಟೋರೆಂಟ್, ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದ ಹುಬ್ಬಳ್ಳಿ ತಾಲ್ಲೂಕಿನಲ್ಲಿ 10 ಮಕ್ಕಳು, ಧಾರವಾಡ ತಾಲ್ಲೂಕಿನಲ್ಲಿ 1 ಮಗು, ಕಲಘಟಗಿ ತಾಲ್ಲೂಕಿನಲ್ಲಿ 2 ಮಕ್ಕಳು, ನವಲಗುಂದ ತಾಲ್ಲೂಕಿನಲ್ಲಿ 2 ಮಕ್ಕಳು,
ಅಣ್ಣೀಗೇರಿ ತಾಲ್ಲೂಕಿನಲ್ಲಿ 2 ಮಕ್ಕಳು ಸೇರಿ ಒಟ್ಟು 17 ಬಾಲ, ಕಿಶೋರಕಾರ್ಮಿಕರನ್ನು ರಕ್ಷಣೆ ಮಾಡಿ ಕೆಲಸದಿಂದ ಬಿಡುಗಡೆಗೊಳಿಸಿ, 5 ಮಕ್ಕಳನ್ನು ಪಾಲಕರ ವಶಕ್ಕೆ ಒಪ್ಪಿಸಿ 12 ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಯಿತು. ಕಲಘಟಗಿ ತಾಲ್ಲೂಕಿನ 2 ಕಿಶೋರ ಕಾರ್ಮಿಕರಾಗಿ ಕಂಡು ಬಂದ ಧಾಬಾದ ಮಾಲೀಕರ ವಿರುದ್ಧ ಪ್ರಕರಣಗಳಿಗೆ ಎಫ್.ಐ.ಆರ್ ದಾಖಲಿಸಲಾಗಿದೆ. ಬಾಕಿ ಉಳಿದ ಪ್ರಕರಣಗಳಿಗೆ ದಾಖಲೆಗಳನ್ನು ಪಡೆದು ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ವಿವಿಧ ಸಂಸ್ಥೆಯ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಬಾಲ ಮತ್ತು ಕಿಶೋರಕಾರ್ಮಿಕ (ನಿಷೇಧ ್ಘ ನಿಯಂತ್ರ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016 ರ ಕುರಿತು ಜಾಗೃತಿಯನ್ನು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಆರಕ್ಷಕ ನೀರೀಕ್ಷಕರು, ಹಿರಿಯ ಕಾರ್ಮಿಕ ನೀರೀಕ್ಷಕರು ಹಾಗೂ ಕಾರ್ಮಿಕ ನೀರೀಕ್ಷಕರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ ಅವರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 