ಉಪಲೋಕಾಯುಕ್ತರಿಂದ ಚಿಕ್ಕೋಡಿ ಪುರಸಭೆಗೆ ಅನೀರೀಕ್ಷಿತ ಭೇಟಿ
Surprise visit by Upalokayukta to Chikkodi Town Municipal Council
ಲೋಕದರ್ಶನ ವರದಿ
ಚಿಕ್ಕೋಡಿ 24: ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ನ್ಯಾ. ವೀರ್ಪ ಅವರು ಗುರುವಾರ(ಸೆ.24) ಚಿಕ್ಕೋಡಿಯ ಪುತಸಭೆಗೆ ಅನೀರೀಕ್ಷಿತ ಭೇಟಿ ನೀಡಿ ಪರೀಶೀಲಿಸಿದರು. ಪುರಸಭೆಯ ಜನನ, ಮರಣ, ಇ-ಸತ್ತು, ಇ-ಖಾತಾ, ಬಿ-ಖಾತಾ ದಾಖಲೆಗಳು ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಕಚೇರಿಯ ಸಿಬ್ಬಂದಿಗಳ ಹಾಜರಾತಿ ವಹಿ, ವಿವಿಧ ಕಡತಗಳನ್ನು ಪರೀಶೀಲಿಸಿದರು. ಪಟ್ಟಣದ ಕಟ್ಟಡ ನಿರ್ಮಾಣ ಪರವಾನಿಗೆ, ತ್ಯಾಜ್ಯ ವಿಲೇವಾರಿ ವಾಹನಗಳ ವಿವರ,ಪಟ್ಟಣದಲ್ಲಿನ ಬೀದಿ ದೀಪಗಳ ನಿರ್ವಹಣೆ ಹಾಗೂ ಅದಕ್ಕೆ ತಗಲುವ ವೆಚ್ಚದ ವಿವರ, ಹೊಸ ಬಡಾವಣೆಗಳಿಗೆ ಅನುಮತಿ ನೀಡಿದರ ವಿವರಗಳನ್ನು ಪಡೆದು ಕಚೇರಿಯ ಸಿಬ್ಬಂದಿಗಳ ಕಳೆದ ಎರಡು ವರ್ಷಗಳ ವೇತನ ವಿವರ ಒದಗಿಸಲು ಮುಖ್ಯಾಧಿಕಾರಿಗಳಿಗೆ ಸೂಚಿಸಿದ ಅವರು ಪಟ್ಟಣದಲ್ಲಿ ಅತಿಕ್ರಮಣ, ನಿಯಮ ಬಾಹಿರ ಕಟ್ಟಡ ನಿರ್ಮಾಣದ ಕುರಿತು ಸಾರ್ವಜನಿಕರ ದೂರುಗಳಿದ್ದಲ್ಲಿ ನೇರವಾಗಿ ಲೋಕಾಯುಕ್ತಗೆ ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಅರವಿಂದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ, ಲೋಕಾಯುಕ್ತ ಎಸ್.ಪಿ. ಪ್ರಸನ್ ದೇಸಾಯಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪ ವಿಭಾಗಾಧಿಕಾರಿ ಎಸ್.ಎಸ್. ಸಂಪಗಾವಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರ್ಪನವರ, ತಹಶೀಲ್ದಾರ ಆರ್.ಆರ್.ಬುರ್ಲಿ, ಮುಖ್ಯಾಧಿಕಾರಿ ಜಗದೀಶ ಈಟಿ ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 