ಉಪ ಲೋಕಾಯುಕ್ತ ಅವರಿಂದ ಚಿಕ್ಕೋಡಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಅನೀರೀಕ್ಷಿತ ಭೇಟಿ
Surprise visit by the Upalokayukta to the Women and Children's Hospital in Chikkodi
ಲೋಕದರ್ಶನ ವರದಿ
ಚಿಕ್ಕೋಡಿ 24: ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ನ್ಯಾ. ವೀರ್ಪ ಅವರು ಗುರುವಾರ(ಸೆ.24) ಚಿಕ್ಕೋಡಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಅನೀರೀಕ್ಷಿತ ಭೇಟಿ ನೀಡಿ ಪರೀಶೀಲಿಸಿದರು. ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆಸ್ಪತ್ರೆಯಲ್ಲಿನ ವೈದ್ಯರು, ಸಿಬ್ಬಂದಿಗಳ ಹಾಜರಾತಿ ವಹಿ ಪರೀಶೀಲಿಸಿದ ಅವರು ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಬಾರದೆ ಇರುವುದು ಹಾಗೂ ಮುಂಚೆಯೆ ಸಹಿ ಮಾಡಿ ಆಸ್ಪತ್ರೆಗೆ ಬಾರದೆ ಇರುವುದನ್ನು ಗಮನಿಸಿ ಆಕ್ರೋಶ ವ್ಯಕ್ತ ಪಡಿಸಿದರು. ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ದಾಖಲಾದ ಬಾಣಂತಿಯವರೊಂದಿಗೆ ಸಮಾಲೋಚನೆ ನಡೆಸಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಒದಗಿಸುವ ಸೌಲಭ್ಯಗಳ ಮಾಹಿತಿ ಪಡೆದು ಶಸ್ತ್ರ ಚಿಕಿತ್ಸೆ ವಿಭಾಗಕ್ಕೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಕಂಡು ಸರಕಾರಿ ಆಸ್ಪತ್ರೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹೆರಿಗೆ ವಿಭಾಗದ ವಿವಿಧ ಕಡತಗಳನ್ನು ಪರೀಶೀಲಿಸಿ ಹೆರಿಗೆಗೆ ದಾಖಲಾಗುವ ಗರ್ಭಿಣಿಯರ ದಾಖಲೆಗಳನ್ನು ಸಮರ್ಕವಾಗಿ ನಿರ್ವಹಿಸದೆ ಇರುವುದನ್ನು ಗಮನಿಸಿದ ಅವರು ಗರ್ಭಿಣಿಯರ ತಪಾಸಣೆ ವೇಳೆ ಅವರ ತಾಯಿ ಕಾರ್ಡ, ಆಧಾರ ಕಾರ್ಡ, ರೇಶನ್ ಕಾರ್ಡ ಮುಂತಾದ ದಾಖಲೆಗಳನ್ನು ಪಡೆದು ರೆಜಿಸ್ಟರಗಳಲ್ಲಿ ನಮೂದಿಸಲು ತಿಳಿಸಿದರು. ಗರ್ಭಿಣಿಯರ ವಿವಿಧ ತಪಾಸಣೆಗಾಗಿ ಖಾಸಗಿ ಆಸ್ಪತ್ರೆ ಹಾಗೂ ಸ್ಕ್ಯಾನ್ ಸೆಂಟರಗಳಿಗೆ ಕಳುಹಿಸುತ್ತಿರುವುದರ ಕುರಿತು ಕಳವಳ ವ್ಯಕ್ತಪಡಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲೂಕು ವೈಧ್ಯಾಧಿಕಾರಿಗಳು ನಿಯಮಿತವಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರೀಶೀಲಿಸದೆ ಇರುವುದನ್ನು ಗಮನಿಸಿ ತರಾಟೆಗೆ ತೆಗೆದುಕೊಂಡರು. ಗರ್ಭಿಣಿಯರಿಗೆ ಆಸ್ಪತ್ರೆಗೆ ಆಗಮಿಸಲು ಅನುಕೂಲವಾಗುವಂತೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಅಗತ್ಯ ಬಿದ್ದಲ್ಲಿ ಮುಖ್ಯ ರಸ್ತೆಯಿಂದ ಆಸ್ಪತ್ರೆ ವರೆಗೆ ಅಂಬ್ಯುಲೆನ್ಸಗಳನ್ನು ಬಳಸಿಕೊಳ್ಳಲು ತಿಳಿಸಿದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 