ಲೋಕದರ್ಶನವರದಿ
ರಾಣೇಬೆನ್ನೂರು22: ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈರುಳ್ಳಿ ಬೆಳೆ ಸಂಪೂರ್ಣ ಹಾನಿಯಾದ ಪರಿಣಾಮ ರೈತನೋರ್ವನು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ಮೃತ ರೈತನನ್ನು ಅದೇ ಗ್ರಾಮದ ಪ್ರಭು ಸಿದ್ದಪ್ಪ ಮಾಕನೂರು(38) ಎಂದು ಗುರುತಿಸಲಾಗಿದೆ.
ಈತನು ತನ್ನ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದನು. ಕಳೆದ ಒಂದು ವಾರಗಳ ಕಾಲ ಸುರಿಯುತ್ತಿರುವ ಮಳೆಯಿಂದಾಗಿ ಈರುಳ್ಳಿ ಬೆಳೆ ನೀರಿನಲ್ಲಿ ಜಲಾವೃತಗೊಂಡು ಸಂಪೂರ್ಣ ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಪರಸ್ಥಿಯನ್ನು ಕಂಡು ಮನನೊಂದು ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.