ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು: ರೂ12,350 ನಗದು ವಶ
ಬೆಂಗಳೂರು, ಏ.3,ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅಮಾನತು ಮಾಡಿದ್ದಾರೆ. ಬ್ರೇಕ್ ಇನ್ಸ್ ಪೆಕ್ಟರ್ ಗಳಾದ ಟಿ. ಕೆ ಜಯಣ್ಣ ಹಾಗೂ ಕರಿಯಪ್ಪ ಅಮಾನತುಗೊಂಡ ಸಾರಿಗೆ ಅಧಿಕಾರಿಗಳು ಸೇರಿದಂತೆ ಇವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಮ್ ಗಾರ್ಡ್ ವಿವೇಕ್ ಅವರನ್ನು ಚಾಲಕರಿಂದ ಲಂಚ ಪಡೆದ ಹಿನ್ನೆಲೆ ಅಪರ ಪೊಲೀಸ್ ಅಧೀಕ್ಷಕರಾದ ಸಜಿತ್ ಅವರಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕರಿಯಪ್ಪ ಅವರಿಂದ ರೂ. 1250, ಜಯಣ್ಣ ಅವರಿಂದ ರೂ 1100 ಹಾಗೂ ವಿವೇಕ್ ಅವರಿಂದ ರೂ 800 ಹಾಗೂ ಚೆಕ್ ಪೋಸ್ಟ್ ಕಚೇರಿಯಲ್ಲಿ ರೂ. 12350 ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 