ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ಜಿಲ್ಲೆಯ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ತುರ್ತಾಗಿ ದುರಸ್ತಿಗೊಳಿಸಲು ಸ್ವಾಭಿಮಾನಿ ಬಣ ಆಗ್ರಹ

  ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ಜಿಲ್ಲೆಯ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ತುರ್ತಾಗಿ ದುರಸ್ತಿಗೊಳಿಸಲು ಸ್ವಾಭಿಮಾನಿ ಬಣ ಆಗ್ರಹ Swabhimani faction demands urgent repair of roads and drainage system in Vijayapura district as a pr

ಲೋಕದರ್ಶನ ವರದಿ 

ವಿಜಯಪುರ  14: ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ಜಿಲ್ಲೆಯ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ತುರ್ತಾಗಿ ದುರಸ್ತಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ)ದ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಡಾ. ಓದ್ರಾಮ  ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ)ದ ಜಿಲ್ಲಾಧ್ಯಕ್ಷರಾದ ಲಿಂಗರಾಜ ಬಿದರಿಕುಂದಿ ಮಾತನಾಡಿ, ವಿಜಯಪುರ ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಇರುವ ಗುಂಡಿಗಳನ್ನು ತಕ್ಷಣ ಮುಚ್ಚುವ ಕ್ರಮ ಕೈಗೊಳ್ಳಬೇಕು. ಅತಂತ್ರ ಹಾಗೂ ಹಾಳಾಗಿರುವ ಒಳಚರಂಡಿ ಮತ್ತು ಡ್ರೈನೇಜ್ ವ್ಯವಸ್ಥೆಯನ್ನು ಪರೀಶೀಲಿಸಿ ತುರ್ತಾಗಿ ದುರಸ್ತಿ ಮಾಡಬೇಕು.

ಮಳೆ ನೀರು ಸರಾಗವಾಗಿ ಹರಿಯುವಂತೆ ಚರಂಡಿಗಳ ಸ್ವಚ್ಛತೆ ಮತ್ತು ನಿರ್ವಹಣೆಯನ್ನು ನಿಯಮಿತವಾಗಿ ಕೈಗೊಳ್ಳಬೇಕು. ಸಾರ್ವಜನಿಕರಿಗೆ ದುರ್ವಾಸನೆ, ನೀರು ನಿಲ್ಲುವಿಕೆ ಹಾಗೂ ಸಂಚಾರ ತೊಂದರೆ ಆಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಬೇಕು. ಮಳೆಗಾಲದಲ್ಲಿ ಜನರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುಂಚಿತವಾಗಿಯೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವಾರ್ಡ ನಂ.02 ಮತ್ತು 12 ್ಘ 16 ಹಾಗೂ 17, 19, ಮತ್ತು 34, ಇನ್ನು ಹಲವಾರು ವಾರ್ಡಗಳಲ್ಲಿ ರಸ್ತೆ ಮತ್ತು ಡ್ರೈನೇಜ್ ಕಾಮಗಾರಿ ಪೂರ್ಣಗೊಳಿಸಬೇಕು. ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ಈಗ ಬೇಸಿಗೆ ಕಾಲ ಮುಗಿದು ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ, ವಿಜಯಪುರ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಪ್ರತಿವರ್ಷವೂ ರಸ್ತೆಗಳಲ್ಲಿ ನೀರು ನಿಲ್ಲುವುದು, ಒಳಚರಂಡಿ ನೀರು ಮೇಲಕ್ಕೆ ಹರಿದು ದುರ್ವಾಸನೆ ಉಂಟಾಗುವುದು ಹಾಗೂ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗುವುದು ಸಾಮಾನ್ಯ ಸಮಸ್ಯೆಯಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. 

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬಾಸಾಹೇಬ ಹತ್ತರಕಿಹಾಳ, ಹಲವಾರು ಕಡೆಗಳಲ್ಲಿ ಒಳಚರಂಡಿ ವ್ಯವಸ್ಥೆ ಸಮರ​‍್ಕವಾಗಿಲ್ಲದ ಮಳೆ ನೀರು ಸರಿಯಾಗಿ ಹರಿಯದೆ ರಸ್ತೆ ಮೇಲೆಯೇ ನಿಂತು ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿದೆ. ಕೆಲವು ಪ್ರದೇಶಗಳಲ್ಲಿ ಡ್ರೈನೇಜ್ ಪೈಪ್ ಗಳು ಹಾಗೂ ಚರಂಡಿಗಳು ಹಾನಿಗೊಳಗಾಗಿರುವುದರಿಂದ ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯೂ ಹೆಚ್ಚಾಗಿದೆ. ಆದುದರಿಂದ, ಮಳೆಗಾಲದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವಿಜಯಪುರ ಜಿಲ್ಲೆ ವತಿಯಿಂದ ಒತ್ತಾಯಿಸುತ್ತದೆ ಎಂದರು. 

ಈ ಸಂದರ್ಭದಲ್ಲಿ  ಜಿಲ್ಲಾ ಉಪಾಧ್ಯಕ್ಷರಾದ ಪ್ರಭು ಮಂಕಣಿ, ಜಿಲ್ಲಾ ಶಿಸ್ತು ಸಮಿತಿ ಅಧ್ಯಕ್ಷರಾದ ಸೋಮಶೇಖರ ಮಾ. ಪಾಟೀಲ, ಜಿಲ್ಲಾ ಸಮಿತಿ ಸದಸ್ಯ ಹುಸೇನಸಾಬ ಮುಲ್ಲಾ, ಜಿಲ್ಲಾ ಸಮಿತಿ ಸದಸ್ಯರಾದ ರಾಜು ಪಟ್ಟಣಶೆಟ್ಟಿ, ವಿರೇಶ ಮಾಲನೂರ, ವಿನೋದ ಸಾಳುಂಕೆ, ಗೋಪಾಲ ಸಿಂಪಿ, ಭಾಗ್ಯಶ್ರೀ ಗಡದಿನ್ನಿ, ಪ್ರಕಾಶ ಸಬರದ, ಜಯಶ್ರೀ  ಸೌಧಾಗರ, ವಿನೋದ ಖೇಡ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.