ಧಾರವಾಡ ಜಿಲ್ಲೆಯಾದ್ಯಂತ ಸ್ವಚ್ಛತಾ ಹೀ ಸೇವಾ ವಿಶೇಷ ಜನಾಂದೋಲನ
Swachhata Hee Seva Special Janandolan across Dharwad district
ಧಾರವಾಡ ಸೆ.17: ಮಹಾತ್ಮಗಾಂಧಿ ಜಯಂತಿ ಅಂಗವಾಗಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಜಿಲ್ಲೆಯಾದ್ಯಂತ ಸ್ವಚ್ಛತಾ ಹೀ ಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸ್ವಚ್ಚತೆಯೇ ಸೇವೆ-2025 ಎಂಬ ವಿಶೇಷ ಜನಾಂದೋಲನ ಆಯೋಜಿಸಲಾಗಿದೆ. ಸ್ವಚ್ಛೋತ್ಸವ ಎಂಬ ಘೋಷ ವಾಕ್ಯೆದಡಿ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದ್ದಾರೆ.
ಅದರಂತೆ ಇಂದು (ಸೆ. 17) ಜಿಲ್ಲಾ ಪಂಚಾಯತ ಆವರಣದಲ್ಲಿ ಸಸಿ ನೆಡುವ ಹಾಗೂ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವ ಮೂಲಕ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳು ಅಭಿಯಾನಕ್ಕೆ ಚಾಲನೆ ನೀಡಿದರು.
ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಸದ ಸ್ಥಳ ಗುರುತಿಸಿ ಸ್ವಚ್ಛ ಗೊಳಿಸುವುದು, ಸ್ವಚ್ಛ ಹಸಿರು ಉತ್ಸವ ಆಚರಣೆ, ವಿವಿಧ ಚಟುವಟಿಕೆ, ಒಂದು ದಿನ ಒಂದು ಗಂಟೆ ಎಲ್ಲರೂ ಒಟ್ಟಿಗೆ ಶ್ರಮದಾನ ಹಾಗೂ ಇತರೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಅಭಿಯಾನದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿಗಳು, ವ್ಯವಸ್ಥಾಪಕರು, ಜಿಲ್ಲಾ ಪಂಚಾಯತ ಎಲ್ಲ ಸಿಬ್ಬಂದಿಗಳು ಹಾಗೂ ಸ್ವ-ಸಹಾಯ ಸಂಘದ ಮಹಿಳೆಯರು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 