ಸ್ವಚ್ಛತಾ ಹೀ ಸೇವಾ-2025 "ಸ್ವಚೋತ್ಸವ" ಕಾರ್ಯಕ್ರಮ
Swachhta Hee Seva-2025 'Swachotsava' program
ಕಾರವಾರ 17: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕಾರವಾರ ಮತ್ತು ಗ್ರಾಮ ಪಂಚಾಯತ್ ಮಾಜಾಳಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ-2025 "ಸ್ವಚೋತ್ಸವ" ಕಾರ್ಯಕ್ರಮವನ್ನು ಬುಧುವಾರ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಹಮ್ಮಿಕೊಳ್ಳಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಗಲಾ ಬಾಲಕೃಷ್ಣ ಕೊಠಾರಕರ, ಜಿಲ್ಲಾ ಪಂಚಾಯತಿಯ ಆಡಳಿತ ಉಪ ಕಾರ್ಯದರ್ಶಿ ಅಲ್ಲಾಬಕ್ಷ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮಪ್ಪನ್ನವರ, ಯೋಜನಾ ನಿರ್ದೇಶಕ ಕರೀಂ ಅಸದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ ಸೇರಿದಂತೆ ಕಾರ್ಯಪಾಲಕ ಅಭಿಯಂತರರು, ಖಘಖ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಆಡಳಿತ) ಅಲ್ಲಾಬಕ್ಷ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛತೆಯ ಕನಸನ್ನು ನನಸು ಮಾಡಲು ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿ, ಸ್ವಚ್ಛತಾ ಹೀ ಸೇವಾ-2025ರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮ ಶೇಖರ ಮೇಸ್ತಾ ಮಾತನಾಡಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬ್ಯಾಗ್‌ಗಳ ಬಗ್ಗೆ ಪರ್ಯಾಯ ವಸ್ತುಗಳ ಸಂಶೋಧನೆ ಹಾಗೂ ಪರಿಸರವನ್ನು ಸ್ವಚ್ಛವಾಗಿಡುವ ಬಗ್ಗೆ ವಿವರಿಸಿದರು.ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವೀರಣಗೌಡ ಎನಗಗೌಡರ ಮಾತನಾಡಿ, ಪರಿಸರದ ಪ್ರಜ್ಞೆ ಹಾಗೂ ಈ ಕಾರ್ಯಕ್ರಮದ ಆಯೋಜನೆಯ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.ವೇದಿಕೆ ಕಾರ್ಯಕ್ರಮದ ನಂತರ ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಯೋಜನೆಯ ವಿವಿಧ ಘಟಕಗಳ ಬಗ್ಗೆ ಮಾಹಿತಿ ಹಾಗೂ ವಿಡಿಯೋ ಪ್ರದರ್ಶನವನ್ನು ಏರಿ್ಡಸಲಾಯಿತು. ನಂತರ ಕಾಲೇಜು ಕ್ಯಾಂಪಸ್ ನಲ್ಲಿ ಗಿಡ ನೆಡುವ ಮೂಲಕ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆಯನ್ನು ನೀಡಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕರಿಂದ ಸ್ವಚ್ಛತಾ ಶ್ರಮದಾನವನ್ನು ಮಾಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 