ಜನವರಿ 10ರಂದು ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ
Swami Vivekananda's birth anniversary on January 10th
ಹುಬ್ಬಳ್ಳಿ 08: ರಾಮಕೃಷ್ಣ ವಿವೇಕಾನಂದ ಆಶ್ರಮ, ಹುಬ್ಬಳ್ಳಿ ಹಾಗೂ ಶ್ರೀರಾಮಕೃಷ್ಣ ಸೇವಾ ಸಮಿತಿ, ಹುಬ್ಬಳ್ಳಿ ಇವರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತ್ಯುತ್ಸವವನ್ನು ಜನವರಿ 10, 2026ರ ಶನಿವಾರ ಹುಬ್ಬಳ್ಳಿಯ ಲಿಂಗರಾಜನಗರ ದಕ್ಷಿಣ ಸಮುದಾಯ ಭವನದಲ್ಲಿ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು.
ಕಾರ್ಯಕ್ರಮವು ಮುಂಜಾನೆ 9.00 ಗಂಟೆಗೆ ಶ್ರೀ ಶಿವ ಸಹಸ್ರನಾಮದೊಂದಿಗೆ ಪುಷ್ಪಾರ್ಚನೆಯಿಂದ ಆರಂಭವಾಗಲಿದೆ. ಬಳಿಕ 10.30ಕ್ಕೆ ಶ್ರೀ ವಿವೇಕಾನಂದ ಹೋಮ, 11.30ಕ್ಕೆ ಪರಮಪೂಜ್ಯ ಸ್ವಾಮೀಜಿಯವರಿಂದ ಭಜನೆ ನಡೆಯಲಿದೆ.ಮಧ್ಯಾಹ್ನ 12.15ಕ್ಕೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಸಂಸ್ಥಾಪಕರು ಹಿ ನಿರಾಮಯ ಫೌಂಡೇಶನ್, ಹುಬ್ಬಳ್ಳಿ ಅವರು ಉಪನ್ಯಾಸ ನೀಡಲಿದ್ದಾರೆ. ನಂತರ ಮಧ್ಯಾಹ್ನ 1.00ಕ್ಕೆ ಮಹಾಮಂಗಳಾರತಿ ಹಾಗೂ ಮಹಾಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6.30ಕ್ಕೆ ಆಶ್ರಮದ ಪ್ರಾರ್ಥನಾ ಮಂದಿರದಲ್ಲಿ ಆರಾತ್ರಿಕಾ ವಿಶೇಷ ಭಜನೆ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಜಯಂತ್ಯುತ್ಸವಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ತಮ್ಮ ಬಂಧು-ಮಿತ್ರರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿ ವಿವೇಕಾನಂದರ ಕೃಪೆಗೆ ಪಾತ್ರರಾಗಲು ಆಶ್ರಮದ ಅಧ್ಯಕ್ಷರಾದ ಪರಮಪೂಜ್ಯ ಸ್ವಾಮಿ ತೇಜಸಾನಂದ ಮಹಾರಾಜ್ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 