ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ
Swami Vivekananda Jayanti Celebration at BLDE Deemed University
ವಿಜಯಪುರ 12: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಇಂದು ಸೋಮವಾರ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಟಿದ ಕುಲಪತಿ ಡಾ. ಅರುಣ ಚಂ. ಇನಾಮದಾರ, ಸ್ವಾಮಿ ವಿವೇಕಾನಂದರ ಜೀವನ ಮತ್ತು ತತ್ವಗಳು ಯುವಜನತೆಗೆ ಪ್ರೇರಣೆಯಾಗಿವೆ. ಅವರ ವಿಚಾರಧಾರೆ ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ವಿಭಾಗದ ಡೀನ್ ಹಾಗೂ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ವೈದ್ಯಕೀಯ ಅಧೀಕ್ಷಕ, ಡಾ. ಸಂಜೀವಕುಮಾರ ಬೆಂಟೂರ, ಡಾ. ಅಶೋಕ ತರಡಿ, ಹಣಕಾಸು ಅಧಿಕಾರಿ ಬಿ. ಎಸ್. ಪಾಟೀಲ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ, ಸಹಾಯಕ ಕಾನೂನು ಅಧಿಕಾರಿ, ಐ. ಬಿ. ಮಠಪತಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು. ಧನ್ಯವಾದಗಳು. ವಿಜಯಪುರ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ ಮುಂತಾದವರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 