ಗದಗ 13: ಸ್ವಾಮಿ ವಿವೇಕಾನಂದರ ಚಿಕ್ಯಾಗೋ ಉಪನ್ಯಾಸದ 125ನೇ ವಷರ್ಾಚರಣೆ ಹಾಗೂ ಅವರ ಜನ್ಮದಿನಾಚರಣೆ ಅಂಗವಾಗಿ ಯವಸಮ್ಮೇಳನವನ್ನು ಜನೇವರಿ 12ರಂದು ಸಂಭ್ರಮದಿಂದ ಹಾಗೂ ಸುವ್ಯವಸ್ಥಿತವಾಗಿ ಆಚರಿಸಲು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚಿಸಿದರು.
ಗದಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿಂದು ಅವರು ಮಾತನಾಡಿದರು. ಗದಗ ಬೆಟಗೇರಿ ನಗರದ ಯುವಜನರು ವಿಶೇಷವಾಗಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ವಿದ್ಯಾಥರ್ಿಗಳು ಈ ಸಮಾರಂಭದಲ್ಲಿ ಹಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮವಹಿಸಲು ಪದವಿ ಪೂರ್ವ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿದರ್ೇಶನ ನೀಡಿದರು. ಇದಲ್ಲದೇ ಸಮಾರಂಭ ಯಶಸ್ವಿಯಾಗಿ ನಡೆಯಲು ವಿವಿಧ ಕಾರ್ಯಗಳ ಜವಾಬ್ದಾರಿ ವಹಿಸಿಕೊಂಡ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಾಮಿ ವಿವೇಕಾನಂದರ ಚಿಕ್ಯಾಗೋ ಉಪನ್ಯಾಸದ 125ನೇ ವಷರ್ಾಚರಣೆ ಹಾಗೂ ಅವರ ಜನ್ಮದಿನಾಚರಣೆ ಅಂಗವಾಗಿ ಯವಸಮ್ಮೇಳನವನ್ನು ಯಶಸ್ವಿಗೊಳಿಸಲು ತಿಳಿಸಿದರು.
ಸ್ವಾಮಿ ವಿವೇಕಾನಂದರ ಚಿಕ್ಯಾಗೋ ಉಪನ್ಯಾಸದ 125ನೇ ವಷರ್ಾಚರಣೆ ಗದಗ ಜಿಲ್ಲಾ ಸಮಿತಿ ಕಾಯರ್ಾಧ್ಯಕ್ಷರಾದ ಡಿ.ಆರ್. ಪಾಟೀಲ ಹಾಗೂ ಸಮಿತಿ ಸದಸ್ಯ ಎ.ಎನ್. ನಾಗರಳ್ಳಿ ಅವರು ಭಾಗವಹಿಸಿದ್ದ ಸಭೆಯಲ್ಲಿ ಸಮಾರಂಭವನ್ನು ಜನೇವರಿ 12ರಂದು ಮುಂಜಾನೆ 11 ಗಂಟೆಗೆ ಗದುಗಿನ ಎ.ಪಿ.ಎಂ.ಸಿ ಆವರಣದಲ್ಲಿನ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಎರ್ಪಡಿಸಲು ನಿರ್ಧರಿಸಲಾಯಿತು. ಚಿಕ್ಯಾಗೋ ಉಪನ್ಯಾಸದ 125ನೇ ವಷರ್ಾಚರಣೆ ಅಂಗವಾಗಿ ಶಾಲಾ ಕಾಲೇಜು ವಿದ್ಯಾಥರ್ಿಗಳಿಗೆ ಏರ್ಪಡಿಸಿದ ವಿವಿಧ ಸ್ಪಧರ್ೇಗಳಲ್ಲಿ ವಿಜೇತರಿಗೆ ಈ ಸಮಾರಂಭದಲ್ಲಿ ಬಹುಮಾನ ವಿತರಿಸುವ, ಸಮಾರಂಭದ ವೇದಿಕೆ, ಅಹ್ವಾನ ಪತ್ರಿಕೆ, ಯುವಜನ ಸ್ಪೂತರ್ಿ ನೀಡುವವರನ್ನು ಅಹ್ವಾನಿಸುವ ಮುಂತಾದ ವಿಷಯಗಳ ಕುರಿತು ಸಭೆಯಲ್ಲಿ ಚಚರ್ಿಸಲಾಯಿತು. ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿದರ್ೇಶಕ ಬಿ.ಬಿ.ವಿಶ್ವನಾಥ ಸರ್ವರನ್ನು ಸ್ವಾಗತಿಸಿ ಸಭೆಯ ಉದ್ದೇಶವನ್ನು ವಿವರಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಬಾರಾಟಕ್ಕೆ, ಕನ್ನಡ ಮತ್ತು ಸಂಸ್ಕೃತಿಯ ಸಹಾಯಕ ನಿದರ್ೇಶಕ ಶರಣು ಗೋಗೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.