ಧರ್ಮಸ್ಥಳ ಸಂಘದಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
Swasthya Sankalpa program by Dharmasthala Sangha
ನೇಸರಗಿ, 17 ; ಸಮೀಪದ ಹಣಬರಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ನೇಸರಗಿ ವಲಯದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಗಳಾದ ವಿಟ್ಟಲ್ ಪಿಸೆ ಹಾಗೂ ಶಾಲೆಯ ಮುಖ್ಯ ಗುರುಗಳಾದ ಗಾಯತ್ರಿ ಪತ್ತಾರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಪ್ರವೀಣ ದೊಡಮನಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾದ ವಿಟ್ಟಲ್ ಪಿಸೆ ಇವರು ಮಕ್ಕಳ ಆರೋಗ್ಯ ದೃಷ್ಟಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು ಹಾಗೂ ಮಕ್ಕಳಿಗೆ ದುಶ್ಚಟಗಳಿಂದ ದೂರ ವಿರುವಂತೆ ಪ್ರತಿಜ್ಞೆ ಮಾಡಿಸಿದರು. ಮುಖ್ಯ ಗುರುಗಳಾದ ಗಾಯತ್ರಿ ಪತ್ತಾರ ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಕುರಿತು ಸಂತೋಷ ವ್ಯಕ್ತಪಡಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕರಾದ ಡಿ ಬಿ ಅತ್ತಾರ, ಸ್ವಾಗತ ಸಹ ಶಿಕ್ಷಕರು ಎಸ್ ಎಸ್ ಹೊಸಮನಿ, ವಂದನೆಯನ್ನು ಸಹ ಶಿಕ್ಷಕರು ಬಿಟಿ ನಾಯಕ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಒಕ್ಕೂಟದ ಪದಾಧಿಕಾರಿಗಳು ಸೇವಾ ಪ್ರತಿನಿಧಿಯಾದ ಗೀತಾ ಹಾಗೂ 110 ಶಾಲಾ ಮಕ್ಕಳು ಉಪಚಿತರಿದ್ದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 