ಆಗಸ್ಟ್‌ 2ರಂದು ಮಾನವ ಹಕ್ಕುಗಳ ಜಿಲ್ಲಾ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಆಗಸ್ಟ್‌ 2ರಂದು ಮಾನವ ಹಕ್ಕುಗಳ ಜಿಲ್ಲಾ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  Swearing-in ceremony of the District Human Rights Committee office-bearers on August 2

ಕೊಪ್ಪಳ, ಜು.30: ಕರ್ನಾಟಕ ಮಾನವ ಹಕ್ಕುಗಳ ಸಮಿತಿ, ಕೊಪ್ಪಳ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಆಗಸ್ಟ್‌ 2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ ಎಂದು ನೂತನ ಜಿಲ್ಲಾಧ್ಯಕ್ಷೆ ಪ್ರೇಮಾ ಎಸ್‌. ಮುದ್ಗಲ್ ತಿಳಿಸಿದರು.  ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.  

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಎಸ್‌. ದರಗದ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ರಾಜ್ಯಾಧ್ಯಕ್ಷ ಶ್ರೀನಿವಾಸ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.  

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್‌. ಅರಸಿದ್ದಿ, ಉಪ ವಿಭಾಗಾಧಿಕಾರಿ ಮಹಬೂಬ್ ಜಿಲಾನಿ, ನ್ಯಾಯವಾದಿಗಳಾದ ಎ.ವಿ. ಕನವಿ, ಸಂಧ್ಯಾ ಮಾದನೂರು, ಪ್ರಕಾಶ್ ಹಾದಿಮನಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.  

ಇದೇ ವೇಳೆ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಮಿತ್ತಲ್, ಸಂತೋಷ್ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಯರಾಮ್, ರಾಜ್ಯ ಕಾರ್ಯದರ್ಶಿ ಚಿದಾನಂದ ಮೂರ್ತಿ, ಸಮಿತಿಯ ಮಾಧ್ಯಮ ಮುಖ್ಯಸ್ಥ ಸೀಸನ್ ಪಿ. ಸೋಮನ್, ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಮೊಹಮ್ಮದ್ ವಸಿ ಉಲ್ಲಾ, ಉಪಾಧ್ಯಕ್ಷ ರಿಜ್ವಾನ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರೇಮಾ ಎಸ್‌. ಮುದ್ಗಲ್ ತಿಳಿಸಿದರು.  

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ಉಮೇಶ್ ನಾಗರೆಡ್ಡಿ, ಪ್ರಧಾನ ಕಾರ್ಯದರ್ಶಿ ವಜೀರ್ ಸಾಬ್ ತಳಕಲ್, ಪದಾಧಿಕಾರಿಗಳಾದ ನಾಗರತ್ನ, ಸಿದ್ದಮ್ಮ, ಕವಿತಾ ಪಾಟೀಲ್, ಅಂದಪ್ಪ ಕೋಳೂರು ಹಾಗೂ ಕಾನೂನು ಸಲಹೆಗಾರ್ತಿ ಕವನ ಎಂ. ಚಿತ್ತವಾಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.