ನವದೆಹಲಿ, ಜೂನ್ 11,ನಾಳೆ ಜಿಎಸ್ ಟಿ ಮಂಡಳಿ ಸಭೆ ನಡೆಯಲಿದ್ದು, ಲಾಕ್ ಡೌನ್ ನಿಂದ ಹಲವು ಸಂಕಷ್ಟದಲ್ಲಿರುವ ಉದ್ಯಮ ವಲಯಕ್ಕೆ ಕೇಂದ್ರ ಸರ್ಕಾರ ಹಿತವಾಗುವ ಸಿಹಿಸುದ್ದಿ ನೀಡಲಿದೆ ಎನ್ನಲಾಗಿದೆ. ಲಾಕ್ ಡೌನ್ ನಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಉದ್ಯಮ ವಲಯಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಹಲವು ವಿನಾಯಿತಿ ರಿಯಾಯಿಇತಿ ಯೋಜನೆಗಳನ್ನು ಪ್ರಕಟಿಸಿದ್ದರೂ ನಾಳಿನ ಜಿಎಸ್ ಟಿ ಸಭೆಯಲ್ಲಿ ಮತ್ತಷ್ಟು ರಿಯಾಯಿತಿ ಘೋಷಿಸುವ ಸಾಧ್ಯತೆ ಇದೆ. ಇನ್ನು ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಗಳಿಗೆ ತೆರಿಗೆ ನಷ್ಟ ಪರಿಹಾರ ನೀಡುವ ಬಗ್ಗೆಯೂ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಎಂದು ಹಣಕಾಸು ಸಚಿವಾಯಲದ ಮೂಲಗಳು ಹೇಳಿವೆ.