ಸೆ.17ರಂದು ವಿಶ್ವಕರ್ಮ ಜಯಂತಿ ಸಾಂಕೇತಿಕ ಆಚರಣೆ
Symbolic celebration of Vishwakarma Jayanti on September 17
ಹಾವೇರಿ, ಸೆ.9 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಸೆ.17ರಂದು ವಿಶ್ವಕರ್ಮ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸದೆ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸೆ.17ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಯಂತಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಅಪರ ಜಿಲ್ಲಾಧಿಕಾರಿ ನಾಗರಾಜ್ ಎಲ್. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರ ಸಲಹೆ-ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಜಯಂತಿ ಆಚರಣೆಯ ಸ್ಥಳ, ಸಮಯ, ಸಂಪನ್ಮೂಲ ವ್ಯಕ್ತಿಗಳು ಹಾಗೂ ಇತರೆ ಕಾರ್ಯಕ್ರಮಗಳ ಕುರಿತು ಸಮುದಾಯದವರ ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು. ವಿಶ್ವಕರ್ಮರ ಕೊಡುಗೆ ಹಾಗೂ ಮಹತ್ವದ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಈ ವರ್ಷ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವುದು ಬೇಡ. ಸಾಂಕೇತಿಕವಾಗಿ ಆಚರಿಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು. ಅಲ್ಲದೆ, ಜಯಂತಿ ಆಚರಣೆಗೆ ನಿಗದಿಪಡಿಸಿರುವ ಅನುದಾನವನ್ನು ಸಮುದಾಯದ ಅಭಿವೃದ್ಧಿಗೆ ಬಳಸುವಂತೆ ಮನವಿ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 