ಕೈರೋ, ನ 24 : ಉತ್ತರ ಸಿರಿಯಾದ ಟಕರ್ಿ ಮಿಲಿಟರಿ ನಿಯಂತ್ರಣದಲ್ಲಿರುವ ಟೆಲ್ ಅಬಾದ್ ಯಲ್ಲಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.
ಗಡಿ ಪಟ್ಟಣದಲ್ಲಿ ಕಾರ್ ಬಾಂಬ್ ಸ್ಫೋಟಿಸಿ ಕನಿಷ್ಠ 10 ಜನರು ಮೃತಪಟ್ಟಿದ್ದು 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ವರದಿಯಾಗಿತ್ತು. ಇದೀಗ ಸ್ಫೋಟಕ್ಕೆ ಬಲಿಯಾದವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಕುದರ್ಿಷ್ ಬಂಡುಕೋರರನ್ನು ಹತ್ತಿಕ್ಕುವ ಕಾಯರ್ಾಚರಣೆಯಲ್ಲಿ ಕಳೆದ ಅಕ್ಟೋಬರ್ ನಲ್ಲಿ ಟಕರ್ಿ ಸೇನಾಪಡೆ ಟೆಲ್ ಅಬಾದಿ ಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು. ಆಗಿನಿಂದ ಈ ಪ್ರದೇಶದಲ್ಲಿ ಅನೇಕ ಕಾರ್ ಬಾಂಬ್ ಸ್ಫೋಟಗಳು ನಡೆಯುತ್ತಿವೆ.