ಕೊಪ್ಪಳ 06: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ಯಲಬುಗರ್ಾ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾದ ಸರ್ಕಾರವು ವಿವಿಧ ಯೋಜನೆಗಳಡಿ ಸಾಧಿಸಿದ ಪ್ರಗತಿ ಮತ್ತು ಸರ್ಕಾರದ ಜನಪರ ಕಾರ್ಯಕ್ರಮಗಳ ಕುರಿತು ವಸ್ತು ಪ್ರದರ್ಶನಕ್ಕೆ ಯಲಬುರ್ಗಾ ತಾ.ಪಂ. ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ ರವರು ರಿಬ್ಬನ್ ಕಟ್ ಮಾಡುವುದರ ಮೂಲಕ ಇಂದು (ಮಾರ್ಚ್ .06) ಚಾಲನೆ ನೀಡಿದರು.
ವಿಶ್ವನಾಥ ಮರಿಬಸಪ್ಪನವರ ಮಾತನಾಡಿ, ``ಅಭಿವೃದ್ಧಿಯೇ ಆಡಳಿತದ ಮಂತ್ರ' ಎಂಬ ವಾಕ್ಯದೊಂದಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರವು ಹತ್ತು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಂಟಾದ ಪ್ರವಾಹದ ಸಂದರ್ಭದಲ್ಲಿ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಂಡಿದೆ. ರೈತರ ಏಳ್ಗೆಗಾಗಿ ಹಮ್ಮಿಕೊಳ್ಳಲಾದ ಯೋಜನೆಗಳು, ನೇಕಾರರ ಹಾಗೂ ಮೀನುಗಾರರ ಸಾಲಮನ್ನಾ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಸಾಧನೆಗಳು ಮತ್ತು ಜನಪರ ಕಾರ್ಯಕ್ರಮಗಳ ಕುರಿತು ಪ್ರದಶರ್ಿಸುವ ಮೂಲಕ ಜನ ಸಾಮಾನ್ಯರಿಗೆ ಮಾಹಿತಿ ತಲುಪಿಸುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಈ ಕಾರ್ಯಕ್ರಮ ವಿಶೇಷವಾಗಿದೆ. ಯಲಬುರ್ಗಾ ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಈ ವಸ್ತು ಪ್ರದರ್ಶನವನ್ನು ವೀಕ್ಷಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ವಸ್ತು ಪ್ರದರ್ಶನದಲ್ಲಿ: ಪ್ರವಾಹ ಸಂತ್ರಸ್ತರ ನೋವಿಗೆ ಮಿಡಿದ ಸರ್ಕಾರ, ಜನಹಿತಕ್ಕಾಗಿ ಸರ್ಕಾರ, ಮೀನುಗಾರರ ಸಾಲಮನ್ನಾ, ನೇಕಾರರ ಸಾಲಮನ್ನಾ, ಸಾಮೂಹಿಕ ವಿವಾಹ ಕಾರ್ಯಕ್ರಮ, ಅಭಿವೃದ್ಧಿಯ ಪಥದಲ್ಲಿ ಕರ್ನಾಟಕ, ಕಲ್ಯಾಣ ಕರ್ನಾಟಕ ಪರ್ವಕ್ಕೆ ಚಾಲನೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಕೊಡುಗೆ ಸೇರಿದಂತೆ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳಡಿ ಮಾಡಿದ ಸಾಧನೆ ಹಾಗೂ ವಿವಿಧ ಜನಪರ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ಪ್ರದರ್ಶಿಸಲಾಗುತ್ತಿದೆ. ಈ ವಸ್ತು ಪ್ರದರ್ಶನವು ಇಂದಿನಿಂದ (ಮಾರ್ಚ್ . 06 ರಿಂದ) 08 ರವರೆಗೆ ನಡೆಯಲಿದೆ.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಯಲಬುರ್ಗಾ ಘಟಕ ವ್ಯವಸ್ಥಾಪಕ ರಮೇಶ ಚಿಣಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಎಂ. ಅವಿನಾಶ, ಯಲಬುರ್ಗಾ ಬಸ್ ನಿಲ್ದಾಣದ ಸಂಚಾರ ನಿಯಂತ್ರಕ ಉಮೇಶಪ್ಪ, ಸೇರಿದಂತೆ ಇಲಾಖೆಯ ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.