ಟಿಇಟಿ - ಸಿಇಟಿ ಪರೀಕ್ಷಾ ತರಬೇತಿ ಕಾರ್ಯಾಗಾರ

ಟಿಇಟಿ - ಸಿಇಟಿ ಪರೀಕ್ಷಾ ತರಬೇತಿ ಕಾರ್ಯಾಗಾರ  TET - CET Exam Training Workshop

ತಾಳಿಕೋಟೆ 30: ಪಟ್ಟಣದ ಪ್ರತಿಷ್ಠಿತ ವಿ.ವಿ. ಸಂಘದ ಖಾಸಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ಐಕ್ಯೂಎಸಿ (ಋಂಅ) ಹಾಗೂ ಕೌಶಲ್ಯ ಅಭಿವೃದ್ಧಿ ಘಟಕದ ಸಂಯುಕ್ತ ಆಶ್ರಯದಲ್ಲಿ ಟಿಇಟಿ ಹಾಗೂ ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಗುರುವಾರ ನಡೆಯಿತು.  

ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಣ್ಣ ಸಂಗಮ್ಮ ಮುತ್ತಗಿ ಅವರು ಇಂಗ್ಲಿಷ್ ವಿಷಯದ ವ್ಯಾಕರಣ, ಟಿಇಟಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾದರಿ, ಸಮಯ ನಿರ್ವಹಣೆ ಹಾಗೂ ಪರಿಣಾಮಕಾರಿ ಪರೀಕ್ಷಾ ಸಿದ್ಧತಾ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.  

ವಿದ್ಯಾರ್ಥಿಗಳು ಹಿಂದಿನ ವರ್ಷಗಳ ಪ್ರಶ್ನೆಪತ್ರಿಕೆಗಳನ್ನು ಅಭ್ಯಾಸ ಮಾಡಬೇಕು. ವಿಷಯವಾರು ಪುನರಾವರ್ತನೆ, ಸಮಯದ ಸಮರ​‍್ಕ ನಿರ್ವಹಣೆ ಹಾಗೂ ನಿರಂತರ ಅಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಸಾಧ್ಯ ಎಂದು ಸಲಹೆ ನೀಡಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಕ್ಯೂಎಸಿ ಸಂಯೋಜಕ ಪ್ರೊ. ಯು.ಎನ್‌. ಮಂಗೊಂಡ ಅವರು ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯೋಜಿತ ಅಧ್ಯಯನ, ಸಮಯ ನಿರ್ವಹಣೆ ಹಾಗೂ ನಿರಂತರ ಅಭ್ಯಾಸ ಅತ್ಯಗತ್ಯ ಎಂದು ತಿಳಿಸಿದರು.  

ಕಾರ್ಯಕ್ರಮದಲ್ಲಿ ಕೌಶಲ್ಯ ಅಭಿವೃದ್ಧಿ ಘಟಕದ ಸಂಯೋಜಕ ಪ್ರೊ. ಸುರೇಶ ಬಡಿಗೇರ ಉಪಸ್ಥಿತರಿದ್ದರು. ಪ್ರಶಿಕ್ಷಣಾರ್ಥಿ ನೇತ್ರಾವತಿ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ದೀಪಿಕಾ ಕಾರ್ಯಕ್ರಮ ನಿರೂಪಿಸಿದರು.

ಭಾಗ್ಯವಂತಿ ಪುಷ​‍್ಾರೆ್ಪಣ ನೆರವೇರಿಸಿದರು. ವರ್ಷಾ ತೊಂಡಿಹಾಳ ವಂದಿಸಿದರು.  ಕಾರ್ಯಾಗಾರದಲ್ಲಿ ಮಹಾವಿದ್ಯಾಲಯದ ಬೋಧಕ ವೃಂದ ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡರು.