ಸಂವಿಧಾನದ ಮೂರು ಆಧಾರ ಸ್ತಂಭಗಳು ಸಮತೋಲನ ಕಾಯ್ದುಕೊಂಡಿವೆ-ಪ್ರಧಾನಿ ಮೋದಿ
ನವದೆಹಲಿ, ಫೆ 22 : ಎಲ್ಲ ಸವಾಲುಗಳ ಮಧ್ಯೆ, ರಾಷ್ಟ್ರಕ್ಕೆ ಮಾರ್ಗದರ್ಶನ ತೋರಲು ಸಂವಿಧಾನದ ಮೂರು ಆಧಾರ ಸ್ತಂಭಗಳಾದ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಸಮತೋಲನವನ್ನು ಕಾಯ್ದುಕೊಂಡಿದ್ದು, ದೇಶವನ್ನು ಸರಿಯಾದ ಹಾದಿಯಲ್ಲಿ ಸಾಗಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶನಿವಾರ ಇಲ್ಲಿ ನಡೆದ ಅಂತಾರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶದಲ್ಲಿ ಕಾನೂನು ನಿಯಮ ಭಾರತದ ಸಾರ್ವಜನಿಕ ನೀತಿಯ ಮೂಲಾಧಾರವಾಗಿದೆ ಎಂದು ಹೇಳಿದ್ದಾರೆ. ‘ಎಲ್ಲ ಸವಾಲುಗಳ ಮಧ್ಯೆ, ಸಂವಿಧಾನದ ಮೂರು ಆಧಾರ ಸ್ತಂಭಗಳು ಅನೇಕ ಬಾರಿ ದೇಶಕ್ಕೆ ಸರಿಯಾದ ಮಾರ್ಗವನ್ನು ತೋರಿಸಿಕೊಟ್ಟಿವೆ. ಇಂತಹ ಶ್ರೀಮಂತ ಸಂಪ್ರದಾಯ ಭಾರತದಲ್ಲಿ ಬೆಳೆದಿದೆ ಎಂಬ ನಮಗೆ ಹೆಮ್ಮೆ ಇದೆ. ಕಳೆದ ಐದು ವರ್ಷಗಳಲ್ಲಿ ದೇಶದ ವಿವಿಧ ಸಂಸ್ಥೆಗಳು ಈ ಸಂಪ್ರದಾಯವನ್ನು ಬಲಪಡಿಸಿವೆ’ ಎಂದು ಅವರು ಶ್ಲಾಘಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 