ತಹಶೀಲ್ದಾರ್ ಮಂಜುನಾಥ ನಾಯಕ ಅಧಿಕಾರ ಸ್ವೀಕಾರ
Tahsildar Manjunath Nayak assumes office
ಕಂಪಿ 12; ಸ್ಥಳೀಯ ತಹಶೀಲ್ದಾರ್ ಕಛೇರಿಯಲ್ಲಿ ನೂತನ ತಹಶೀಲ್ದಾರ್ ಆಗಿ ಮಂಜುನಾಥ ನಾಯಕ ಇವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಒಂದು ವರ್ಷಕ್ಕೂ ಹೆಚ್ಚು ಅವಧಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿವರಾಜ ಶಿವಪುರ ಇವರ ಜಾಗಕ್ಕೆ ನೂತನ ತಹಶೀಲ್ದಾರ್ ಆಗಿ ಮಂಜುನಾಥ ಅಧಿಕಾರವಹಿಸಿಕೊಂಡರು.
ಶಿವರಾಜ ಅವರಿಗೆ ಯಾವುದೇ ಸ್ಥಳವನ್ನು ತೋರಿಸಿಲ್ಲ. ಮಂಜುನಾಥ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಮಂಜುನಾಥ ನಾಯಕ ಮಾತನಾಡಿ, ಈ ಹಿಂದೆ ಬಳ್ಳಾರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುವೆ. ಕೆಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ. ಇಲ್ಲಿನ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಚೇರಿಯ ಸಂಪೂರ್ಣ ಮಾಹಿತಿ ಪಡೆದ ಬಳಿಕ ಆಡಳಿತಕ್ಕೆ ಚುರುಕು ನೀಡಲಾಗುತ್ತದೆ. ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು. ಸಾರ್ವಜನಿಕರು ಮತ್ತು ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಯುವುದಕ್ಕೆ ಕಡಿವಾಣ ಹಾಕಲಾಗುವುದು’ ಎಂದು ತಿಳಿಸಿದರು. ಇಲ್ಲಿನ ಸಿಬ್ಬಂದಿ ವರ್ಗದವರು ನೂತನ ತಹಶೀಲ್ದಾರರಿಗೆ ಮಾಲಾರೆ್ಣ ಮಾಡುವ ಮೂಲಕ ಸ್ವಾಗತಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 