ಬಾಲ್ಯ ವಿವಾಹ ಮಾಡಿದವರ ವಿರುದ್ಧ ನಿರ್ದಕ್ಷೀಣ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಸುನೀಲ ಕುಮಾರ

ಕೊಪ್ಪಳ 31: ಬಾಲ್ಯ ವಿವಾಹ ತಡೆ ಸಮಿತಿಯು ಅಪ್ರಾಪ್ತ ವಯಸ್ಸಿನ ಮಕ್ಕಳ ಮದುವೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲಾ ಆದ್ದರಿಂದ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮಾಡಿದವರ ವಿರುದ್ಧ ನಿರ್ದಕ್ಷೀಣ್ಯ ಕ್ರಮ ಕೈಗೊಳ್ಳುವಂತೆ ಕೊಪ್ಪಳ ಜಿಲ್ಲಾ ಬಾಲ್ಯ ವಿವಾಹ ತಡೆ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ರವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

"ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕನರ್ಾಟಕ ತಿದ್ದುಪಡಿ-2016"ರ ಅನುಷ್ಠಾನ ಕುರಿತು (ಮೇ.30) ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಬಾಲ್ಯ ವಿವಾಹದಿಂದ ಮಗು ಅದರ ಹಕ್ಕುಗಳನ್ನು ಅನುಭವಿಸುವ ಸ್ವಾತಂತ್ರ್ಯದಿಂದ ವಂಚಿತವಾಗುವದು. ಹಾಗೂ ದೌರ್ಜನ್ಯಕೊಳಗಾಗುವದಲ್ಲದೇ ತಾಯಿ-ಶಿಶು ಮರಣಕ್ಕೆ ದಾರಿಯಾಗುತ್ತದೆ.  ಇಂತಹ ಬಾಲ್ಯ ವಿವಾಹಗಳು ಅಪೌಷ್ಠಿಕ ಮಕ್ಕಳ ಜನನಕ್ಕೂ ಸಹ ಕಾರಣವಾಗಲಿವೆ.  ಈ ಹಿನ್ನಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ನ್ನು ಜಾರಿಗೆ ಬಂದಿರುತ್ತದೆ.  ಕೊಪ್ಪಳ ಜಿಲ್ಲೆಯನ್ನು "ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವದು ಜಿಲ್ಲಾಡಳಿತದ ಸಂಕಲ್ಪವಾಗಿದ್ದು, ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಮದುವೆಗಳು ಆದಲ್ಲಿ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲಾ.  ಅಪ್ರಾಪ್ತೆಯೊಂದಿಗೆ ವಿವಾಹವಾದ ವರ ಮತ್ತು ಇಬ್ಬರೂ ಪೋಷಕರ ಹಾಗೂ ವಿವಾಹಕ್ಕೆ ಪ್ರೋತ್ಸಾಹಿಸಿದವರ ವಿರುದ್ಧ ಸಹ ನಿರ್ದಕ್ಷೀಣ್ಯ ಕ್ರಮ ಕೈಗೊಳ್ಳಲಾಗುವದು.  ಆದ್ದರಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಭಾವಕ್ಕೂ ಮಣಿಯದೆಯೇ ಕಾರ್ಯನಿರ್ವಹಿಸಿ ಜಿಲ್ಲೆಯಲ್ಲಿ ಬಾಲ್ಯವಿವಾಹಗಳಿಗೆ ಕಡಿವಾಣವನ್ನು ಹಾಕಿ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ರವರು ಸೂಚನೆ ನೀಡಿದರು. 

ಜಿಲ್ಲಾ  ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ ಮಾತನಾಡಿ, 2018-19 ಮತ್ತು 2019-20ನೇ ಸಾಲಿನಲ್ಲಿ "ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕನರ್ಾಟಕ ತಿದ್ದುಪಡಿ-2016" ರ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಏಪ್ರೀಲ್-2018 ರಿಂದ 25 ಮೇ 2019ರವರೆಗೆ ಜಿಲ್ಲೆಯಲ್ಲಿ ಬಾಲ್ಯವಿವಾಹದಿಂದ 193 ಬಾಲಕಿಯರನ್ನು ಮತ್ತು 04 ಬಾಲಕರನ್ನು ಬಾಲ್ಯವಿವಾಹದಿಂದ ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಪಡಿಸಿದೆ.  ಬಾಲ್ಯ ವಿವಾಹವನ್ನು ಮಾಡಿದವರ ವಿರುದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ-2006ರಡಿಯಲ್ಲಿ 14 ಪ್ರಕರಣಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ-2016 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರಡಿಯಲ್ಲಿ 3 ಪ್ರಕರಣಗಳನ್ನು ಸೇರಿದಂತೆ ಒಟ್ಟು 17 ಪ್ರಕರಣಗಳನ್ನು ದಾಖಲಿಸಿದೆ.  3 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ಪಡೆದು ಬಾಲ್ಯವಿವಾಹವನ್ನು ತಡೆಗಟ್ಟಿದ್ದು ಈ ಪ್ರಕ್ರೀಯಲ್ಲಿ ಜಿಲ್ಲಾ ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಕೊಪ್ಪಳರವರ ಸಹಕಾರ ಶ್ಲಾಘನೀಯವಾಗಿದೆ ಎಂದರು.  

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೇಶಕ ಈರಣ್ಣಾ ಪಾಂಚಾಳ್ ಸೇರಿದಂತೆ ಜಿಲ್ಲೆಯ ವಿವಿದ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಬಾಲಮಂದಿರಗಳ ಅಧೀಕ್ಷಕರು, ಮಕ್ಕಳ ಸಹಾಯವಾಣಿ-1098ರ ಸಿಬ್ಬಂದಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ವಿವಿಧ ಇಲಾಖೆಗಳ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.