ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
Take action against the miscreants who tore down Kannada language nameplates.
ಬೆಳಗಾವಿ : ತಾಲೂಕಿನ ಬಂಬರಗಾ ಗ್ರಾಮದಲ್ಲಿ ಇತ್ತಿಚೆಗೆ ನಡೆದ ಲಕ್ಷ್ಮೀ ಜಾತ್ರೆ ಸಂದರ್ಭದಲ್ಲಿ ಕನ್ನಡ ಭಾಷೆಯ ನಾಮಫಲಕಗಳನ್ನು ಹರಿದು ಹಾಕುವ ಮೂಲಕ ಭಾಷಾ ಸೌಹಾರ್ದತೆಗೆ ಧಕ್ಕೆ ತಂದಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಕೊಳ್ಳುವಂತೆ ಗಡಿನಾಡು ಕನ್ನಡಿಗರ ಸೇನೆ ಸಂಘಟನೆಯ ಪದಾಧಿಕಾರಿಗಳು ಕಾಕತಿ ಸರ್ಕಲ್ ಮೋಲೀಸ್ ಇನ್ಸಪೇಕ್ಟರ್ ಅವರಿಗೆ ಮನವಿಯೊಂದನ್ನು ನೀಡಿದರು.
ಕಾಕತಿ ಪೊಲೀಸ ಠಾಣೆಗೆ ಆಗಮಿಸಿದ ಪದಾಧಿಕಾರಿಗಳು ಈ ಕುರಿತು ಮನವಿಯೊಂದನ್ನು ನೀಡಿ, ಭಾಷಾ ಮತ್ತು ಕೋಮು ಸೌಹಾರ್ದತೆಗೆ ಹೆಸರಾಗಿರುವ ಬೆಳಗಾವಿ ತಾಲೂಕಿನ ಬಂಬರಗಾ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಮಹಾಲಕ್ಷ್ಮೀ ಜಾತ್ರೆಯ ಕಾಲಕ್ಕೆ ಕೆಲವು ಕಿಡಿಗೇಡಿಗಳು ಭಾಷಾ ಸೌಹಾರ್ದತೆಗೆ ಧಕ್ಕೆ ತರುವಂತ ಕೆಲಸ ಮಾಡಿದ್ದಾರೆ.
ದಿ.21-04-2026ರಂದು ಬೆಳಗಿನ ಜಾವ ಜಾತ್ರೆಯ ಶುಭಾಶಯಗಳನ್ನು ತಿಳಿಸುವ ಬ್ಯಾನರ್‌ಗಳನ್ನು ಹರಿದು ಹಾಕಲಾಗಿದೆ. ಕನ್ನಡ ಪರ ಸಂಘಟನೆಗಳ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಸಹ ಹರಿದು ಬಿಸಾಕಲಾಗಿದೆ.
ಇದರಿಂದ ಬಂಬರಗಾ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಹಿರಿಯರ ಮಧ್ಯ ಪ್ರವೇಶದಿಂದಾಗಿ ವಾತಾವರಣ ತಿಳಿಯಾಯಿತು. ಆದರೆ ಕಿಡಿಗೇಡಿತನ ಕೆಲಸ ಮಾಡಿದ ಕೆಲವರನ್ನು ಈಗ ಪತ್ತೆ ಹಚ್ಚುವ ಕೆಲಸ ಮಾಡಬೇಕಾಗಿದೆ. ಗ್ರಾಮದಲ್ಲಿ ಮುಂದೆಯಾದರು ಇಂತ ಅಚಾತುರ್ಯಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕಾಗಿದೆ. ಆದ್ದರಿಂದ ತಾವು ಗ್ರಾಮದ ಪ್ರಮುಖರನ್ನು ಹಾಗೂ ಹಿರಿಯರನ್ನು ವಿಶ್ವಾಸದಲ್ಲಿ ತೆಗೆದುಕೊಂಡು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಕೊಳ್ಳಬೇಕೆಂದು ಮವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಗಡಿನಾಡು ಕನ್ನಡಿಗರ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 