ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಆನಂದ ಕೆ.

 ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಆನಂದ ಕೆ.  Take action for construction of dog shelter: District Collector Dr. Ananda K.

ಲೋಕದರ್ಶನ ವರದಿ .

ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಆನಂದ ಕೆ.  

ವಿಜಯಪುರ ಅ.10: ಸರ್ವೋಚ್ಛ ನ್ಯಾಯಾಲಯದ ತೀರ​‍್ಿನಂತೆ ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಬುರಾನಪುರನಲ್ಲಿ ಕಾಯ್ದಿರಿಸಿದ  ಎರಡು ಎಕರೆ ಜಾಗದಲ್ಲಿ ಡಾಗ್ ಶೆಲ್ಟರ್ ನಿರ್ಮಾಣಕ್ಕಾಗಿ ನೀಲ ನಕ್ಷೆ ತಯಾರಿಸಿ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.  

ಸೋಮವಾರ ನಗರದ ಬುರಾನಪುರದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ನಂತರ, ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಸೂಚನೆ ನೀಡಿ, ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಕಾಳಜಿಯಿಂದ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.  

ನಗರದಲ್ಲಿರುವ ಪಶುಪಾಲನಾ ಇಲಾಖೆ ಕಚೇರಿಗೆ ಭೇಟಿ ನೀಡಿದ ಅವರು, ಬೀದಿ ನಾಯಿಗಳ ಸಂತಾನ ಹರಣಶಸ್ತ್ರ ಚಿಕಿತ್ಸಾ ಕಾರ್ಯಕ್ರಮದ ಕಟ್ಟಡವನ್ನು ನವೀಕರಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ ಅವರು, ಪಾಲಿಕ್ಲಿನಿಕ್‌ಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಸಂದರ್ಭದಲ್ಲಿ ಜಾನುವಾರು ಚಿಕಿತ್ಸೆ, ನಾಯಿ ಮತ್ತು ಬೆಕ್ಕುಗಳ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸಾ ಕೊಠಡಿ, ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡುವುದನ್ನು ಸಂಬಂಧಿಸಿದ ಪಶುವೈದ್ಯರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.  

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಅಶೋಕ ಘೋಣಸಗಿ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ವಿ.ಎನ್‌.ಹಾಸಂಗಿಹಾಳ, ಅಮೋಘ ತಳವಾರ ಸೇರಿದಂತೆ ವಿವಿಧ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು. 


ಜಿಲ್ಲಾಡಳಿತದಿಂದ ಅ.23ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ 

ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿಗಳಿಗೆ ಸೂಚನೆ 

ವಿಜಯಪುರ ಅ.10:  ಜಿಲ್ಲಾಡಳಿತದ ವತಿಯಿಂದ  ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ  ಸಂಬಂಧಿಸಿದ  ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸೂಚನೆ ನೀಡಿದರು. 

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. 

ಅ.23ರ ಬೆಳಿಗ್ಗೆ 9:30 ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ  ವಿವಿಧ ಕಲಾತಂಡಗಳೊಂದಿಗೆ  ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರದ ಮೆರವಣಿಗೆ, ಬೆಳಿಗ್ಗೆ 10:30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಜಯಂತಿ ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಜಯಂತಿ ಕಾರ್ಯಕ್ರಮಕ್ಕೆ ಅತಿಥಿಗಳಿಗೆ ಆಹ್ವಾನ, ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಚರಿತ್ರೆ ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ, ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯ ರೂಪುರೇಷೆ ಸಿದ್ಧಪಡಿಸಿಕೊಳ್ಳುವುದು ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ವೃತ್ತಗಳಿಗೆ ದೀಪಾಲಂಕಾರ,ಆಸನ ವ್ಯವಸ್ಥೆ,,ವೇದಿಕೆ ಸಿದ್ಧತೆ ಏರಿ​‍್ಡಸುವುದೂ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. 

ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿಯಾತ್ರೆಗೆ ಇಂದು ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, ಅ.15ರಂದು ಬಾಗಲಕೋಟೆಯಿಂದ ಕೊಲ್ಹಾರ ಮಾರ್ಗವಾಗಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಸಂಜೆ 6-30ರಿಂದ 7-30ರವರೆಗೆ ಜ್ಯೋತಿಯಾತ್ರೆಯನ್ನು ಜಿಲ್ಲೆಯಲ್ಲಿ ಸ್ವಾಗತಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.  

ಈ ಸಂದರ್ಭದಲ್ಲಿ  ಸಮಾಜದ ಮುಖಂಡರು ತಮ್ಮ ಅಗತ್ಯ ಸಲಹೆ ಸೂಚನೆ ನೀಡಿದರು. ಕ್ರೀಡಾಧಿಕಾರಿ ರಾಜಶೇಖರ ದೈವಾಡಿ ಅವರು ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮದ ರೂಪುರೇಷೆ ಕುರಿತು ಮಾಹಿತಿ ನೀಡಿದರು. 

ಸಭೆಯಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ವಿವಿಧ ಸಮಾಜದ ಮುಖಂಡರು,  ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.