ದೌರ್ಜನ್ಯ ಪ್ರಕರಣ ತ್ವರಿತ ವಿಲೇವಾರಿಗೆ ಕ್ರಮ ವಹಿಸಿ: ರಿಷಿ ಆನಂದ ಸೂಚನೆ
Take action for speedy disposal of Violence case: Rishi Anand instructs
ವಿಜಯಪುರ 01: ದೌರ್ಜನ್ಯ ಪ್ರಕರಣಗಳಲ್ಲಿ ಸಕಾಲದಲ್ಲಿ ತ್ವರಿತ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಪಂಚಾಯತಿಯ ಮುಖ್ಯಕಾರ್ಯ ನಿರ್ವಣಾಧಿಕಾರಿಗಳಾದ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಈ ಸೂಚನೆ ನೀಡಿದರು.ಅರ್ಹ ಫಲಾನುಭವಿಗಳು ಪಹಣಿ ಪತ್ರ ಪಡೆಯಲು ಸಮಾಜ ಕಲ್ಯಾಣ ಇಲಾಖೆಯಿಂದ ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ, ತಹಶೀಲ್ದಾರರಿಗೆ ಸಲ್ಲಿಸಿ, ಪಹಣಿಪತ್ರ ಸಿದ್ದಪಡಿಸಲು ಸಹಕರಿಸಬೇಕು ಎಂದು ಅವರು ಹೇಳಿದರು.
ಡಾ. ಬಿ.ಆರ್.ಅಂಬೇಡ್ಕರ ವೃತ್ತ ನಿರ್ಮಾಣಕ್ಕೆ ಸ್ಥಳಾವಕಾಶ ಕುರಿತು ಸದಸ್ಯರಾದ ಯಮನಪ್ಪ ಸಿದರಡ್ಡಿ ಅವರು ಮಾಡಿದ ಮನವಿ ಆಲಿಸಿದ ಅವರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರೀಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಿದರು.
ಪ್ರತಿ ಸಭೆಗೂ ಮುನ್ನ ಸಭೆಯ ಕುರಿತು ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ, ಉಸ್ತುವಾರಿ ಸಮಿತಿಯ ಸದಸ್ಯರಿಗೆ ಒದಗಿಸುವಂತೆ ಹಾಗೂ ಸಣ್ಣ ಪುಟ್ಟ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಭೇಟಿ ನೀಡಿ ಪ್ರಕರಣ ಕುರಿತು ಮಾಹಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವಂತೆ ಅವರು ಸಭೆಗೆ ತಿಳಿಸಿದರು.
ಪರಿಶಿಷ್ಟ ಜಾತಿ ಕಾಲೋನಿಯಲ್ಲಿರುವ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಚಗೊಳಿಸಿ, ಶುಚಿತ್ವ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಭೂ ಒಡೆತನ ಯೋಜನೆಯಡಿ ಖರೀದಿಯಾದ ಜಮೀನುಗಳಿಗೆ ಆರ್‌ಟಿಸಿ ಹಾಗೂ ಪಹಣಿ ಬದಲಾವಣೆ ಅರ್ಹ ಫಲಾನುಭವಿಗಳಿಗೆ ತೊಂದರ ತಪ್ಪಿಸಿ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಕ್ರೂಢೀಕರಿಸಿಕೊಂಡು ಅರ್ಹ ಫಲಾನುಭವಿಗಳಿಗೆ ಅನುಕೂಲವಾಗಲು ಕ್ರಮವಹಿಸುವಂತೆ ಅವರು ಸೂಚಿಸಿದರು.
ಭೂ ಒಡೆತನ ಯೋಜನೆಯಡಿ ಇಲ್ಲಿಯವರೆಗೆ ಸ್ವೀಕರಿಸಿದ ಅರ್ಜಿ ಹಾಗೂ ಇತ್ಯರ್ಥಗೊಳಿಸಿದ್ದ ಕುರಿತ ಪಟ್ಟಿ ನೀಡುವಂತೆ ಸಂಬಂಧಿಸಿದ್ದ ಅಧಿಕಾರಿಗಳಿಗೆ ಸೂಚಿಸಿದ ಅವರು ಸಮಾಜ ಕಲ್ಯಾಣ ಇಲಾಖೆಯು ಪ್ರಗತಿಯ ಕುರಿತು ಆಗಾಗ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಬೇಕು ಎಂದು ಹೇಳಿದರು.
ಈಗಾಗಲೇ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆಯೂ, ಸ್ಮಶಾನದ ಜಾಗ ಒತ್ತುವರಿ, ಮಹರ್ಷಿ ವಾಲ್ಮಿಕಿ ಸಮುದಾಯ ಭವನ ನಿರ್ಮಾಣ ಸೇರಿದಂತೆ ಸಮಿತಿ ಸದಸ್ಯರ ಮನವಿಗೆ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.ಸಮಿತಿ ಸದಸ್ಯರಾದ ಅಭಿಷೇಕ ಚಕ್ರವರ್ತಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಜಾತಿ ನಿಂದನೆ, ದೌರ್ಜನ್ಯ ನಿಂದನೆ ಪ್ರಕರಣಗಳು ದಾಖಲಾಗದಂತೆ ಸೂಕ್ತ ಜಾಗೃತಿ ಮೂಡಿಸಬೇಕು. ಈಗಾಗಲೇ ದಾಖಲಾಗಿರುವ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ ಸಭೆಯಲ್ಲಿ ಅವರು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಪ್ರತಿ ತಿಂಗಳು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಕುಂದು ಕೊರತೆ ದೌರ್ಜನ್ಯ ಪರಿಹಾರ ಕುರಿತು ಸಭೆಗಳನ್ನು ಏರಿ್ಡಸಲಾಗುತ್ತಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ವತಿಯಿಂದ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಸಹಾಯ ಸಹಕಾರ ನೀಡುವುದಾಗಿ ಅವರು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಹೇಮಲತಾ ವಸ್ತ್ರದ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ರಾಜಶೇಖರ ಚೌರ, ನಾನು ಸೋಮಲು ಲಮಾಣಿ, ಮಹಾಂತೇಶ ಧರ್ಮಣ್ಣ ಸಾಸಬಾಳ, ಬಂದಗಿ ಸಿದ್ದಪ್ಪ ಗಸ್ತಿ, ಮದನಕುಮಾರ ನಾಗರದಿನ್ನಿ, ರವಿಕಾಂತ ಬಿರಾದಾರ, ಯಮನಪ್ಪ ಸಿದರಡ್ಡಿ, ಸಿದ್ದು ರಾಯಣ್ಣವರ, ಮಲ್ಲು ತಳವಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 