ಜಿಲ್ಲೆಯಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಕ್ರಮ ಜರುಗಿಸಿ: ಡಿಸಿ. ಡಾ. ಸುರೇಶ ಬಿ. ಇಟ್ನಾಳ
Take action if marijuana is found growing in the district: DC. Dr. Suresh B. Itnal
ಕೊಪ್ಪಳ 06: ಕೊಪ್ಪಳ ಜಿಲ್ಲೆಯ ಅರಣ್ಯ ಪ್ರದೇಶ ಮತ್ತು ಜಮೀನುಗಳಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು. ಮಾಧಕ ವಸ್ತುಗಳ ಬಳಕೆ ಮಾಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ನಿಷೇಧ ಕುರಿತು ಜಾಗೃತಿ ಮೂಡಿಸಲು ಸಮಿತಿಗಳನ್ನು ರಚಿಸಿ ವರದಿ ನೀಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸೀಜನ್ ಆಗಿರುವುದರಿಂದ ಆನೆಗೊಂದಿ ಭಾಗದಲ್ಲಿರುವ ಎಲ್ಲಾ ಹೋಂಸ್ಟೆ, ರೆಸಾರ್ಟ್, ಡಾಭಾಗಳು, ಹೋಟೆಲ್, ಪಾನಬೀಡಾ ಅಂಗಡಿಗಳಲ್ಲಿ ಮಾಧಕ ವಸ್ತುಗಳ ಮಾರಾಟದ ಬಗ್ಗೆ ಪರೀಶೀಲನೆ ನಡೆಸುವುದರ ಜೊತೆಗೆ ಜಿಲ್ಲೆಯ ಯಾವುದೇ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯದಂತೆ ನೋಡಿಕೊಳ್ಳವುದರ ಜೊತೆಗೆ ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅನೀರೀಕ್ಷಿತ ದಾಳಿ ನಡೆಸಿ ಪರೀಶೀಲನೆ ಮಾಡಬೇಕು. ಈ ಕೆಲಸ ವಿಶೇಷವಾಗಿ ವೀಕೆಂಡನಲ್ಲಿ ಮಾಡಬೇಕೆಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ ಜಿಲ್ಲೆಯ ಯಾವುದೇ ಭಾಗದಲ್ಲಿ ಮಾಧಕ ವಸ್ತುಗಳ ಮಾರಾಟ ಕಂಡು ಬಂದರೆ ಅಂತಹವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಈಗಾಗಲೇ ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ವಿಶೇಷವಾಗಿ ಶನಿವಾರ ಮತ್ತು ಭಾನುವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರೀಶೀಲನೆ ಮಾಡುವಂತೆ ನಿರ್ದೆಶನ ನೀಡಿದ್ದೆನೆ. ಕೂಕನಪಳ್ಳಿ ಸಂತೆಯ ದಿನ ಜನರು ರಸ್ತೆಯ ಮೇಲೆ ಕುಳಿತು ಮಧ್ಯ ಮಾರಾಟ ಮಾಡುತ್ತಾರೆ ಎನ್ನುವ ದೂರುಗಳಿಗೆ ತಕ್ಷಣ ಅದನ್ನು ನಿಲ್ಲಿಸಬೇಕೆಂದು ಅಬಕಾರಿ ಅಧಿಕಾರಿಗೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾದಿಕಾರಿ ನಿರ್ಮಲಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ಮಂಜುನಾಥ ಗುಂಡೂರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಹೇಮಂತ್ ಸೇರಿದಂತೆ ಸಹಾಯಕ ಓಷಧ ನಿಯಂತ್ರಣಾಧಿಕಾರಿಗಳು, ಅಬಕಾರಿ ಹಾಗೂ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 