ಕೊಪ್ಪಳ 23: ಜಿಲ್ಲೆಯ ಯಾವುದೇ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್ನಲ್ಲಿ ಇಂದು (ಆಗಸ್ಟ್.23) ಆಯೋಜಿಸಲಾಗಿದ್ದ ವಸತಿ ನಿಲಯ ಮತ್ತು ವಸತಿ ಶಾಲೆಗಳ ಪ್ರಾಚಾರ್ಯರು ಮತ್ತು ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ-66, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ-22, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ-74 ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ-24 ಸೇರಿದಂತೆ ಒಟ್ಟು 186 ಸಂಸ್ಥೆಗಳು(ಕಟ್ಟಡಗಳು) ಸಂಬಂಧಿಸಿದ ಇಲಾಖೆಯಡಿ ಮೆಟ್ರಿಕ್ ಪೂರ್ವ ವಸತಿ ನಿಲಯಗಳು, ಮೆಟ್ರಿಕ್ ನಂತರದ ವಸತಿ ನಿಲಯಗಳು ಹಾಗೂ ವಸತಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ಎಲ್ಲಾ ಸಂಸ್ಥೆಗಳ ಮೇಲ್ವಿಚಾರಕರು ಹಾಗೂ ಪ್ರಾಚಾರ್ಯರು ತಮ್ಮ ವಸತಿ ನಿಲಯದಲ್ಲಿರುವ ವಿದ್ಯಾಥರ್ಿಗಳ ಬಗ್ಗೆ ಹೆಚ್ಚಿನ ಜವಾಬ್ದಾರಿ ಹೊಂದಿರಬೇಕು. ಯಾವ ಕೆಲಸವನ್ನು ಯಾರಿಂದ ಮಾಡಿಸಬೇಕು ಎಂಬ ತಿಳುವಳಿಕೆ ಇರಬೇಕು. ವಸತಿ ನಿಲಯದ ಮಕ್ಕಳಿಂದ ಅಪಾಯಕಾರಿ ಕೆಲಸಗಳನ್ನು ಮಾಡಿಸಿದಲ್ಲಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಸಂಬಂಧಿಸಿದ ಇಲಾಖೆ ನೀಡುವ ಅನುದಾನದಲ್ಲಿ ಮಕ್ಕಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಿಮ್ಮೆಲ್ಲರ ಕರ್ತವ್ಯ ಅದನ್ನು ನಿಷ್ಟೆಯಿಂದ ನಿರ್ವಹಿಸಿ ಎಂದು ಹೇಳಿದರು.
ಇದೇ ಆಗಸ್ಟ. 18 ರಂದು ಕೊಪ್ಪಳ ನಗರದ ಬನ್ನಿಕಟ್ಟಿ ಪ್ರದೇಶದಲ್ಲಿನ ಡಿ.ದೇವರಾಜ್ ಅರಸು ವಸತಿ ನಿಲಯದಲ್ಲಿ ವಿದ್ಯುತ್ ಅವಘಡದಿಂದ ಐವರು ವಿದ್ಯಾಥರ್ಿಗಳು ಸಾವನ್ನಪ್ಪಿದ ಬಗ್ಗೆ ಪ್ರಸ್ತಾಪಿಸಿದ ಅವರು ವಸತಿ ನಿಲಯ ಅಥವಾ ವಸತಿ ಶಾಲೆ ಕಟ್ಟಡ ಯಾವುದೇ ಇದ್ದರೂ ಸಕರ್ಾರದ ನಿದರ್ಿಷ್ಟ ಮಾನದಂಡಗಳನ್ನು ಅನುಸರಿಸಿ ವಿದ್ಯುತ್ ಪರಿವರ್ತಕಗಳು, ವಿದ್ಯುತ್ ತಂತಿ ಮಾರ್ಗಗಳು, ವಿದ್ಯುತ್ ಕಂಬಗಳನ್ನು ಅಳವಡಿಸಿ. ಕಟ್ಟಡಗಳ ಬಳಿಯೇ ವಿದ್ಯುತ್ ತಂತಿ ಮಾರ್ಗ ಅಳವಡಿಸುವ ಅನಿವಾರ್ಯತೆ ಇದ್ದರೆ ಅಂತಹ ಜಾಗಗಳಲ್ಲಿ ರಕ್ಷಣಾ ಸಾಧನಗಳನ್ನು ಕಡ್ಡಾಯವಾಗಿ ಅಳವಡಿಸಿ. ಈಗಾಗಲೇ ವಿದ್ಯುತ್ ತಂತಿ ಅಳವಡಿಸಿರುವ ಕಡೆಗಳಲ್ಲಿ ಸಾಧ್ಯತೆಗಳ ಆಧಾರದಲ್ಲಿ ಮಾರ್ಗ ಬದಲಾವಣೆಗೆ ಕ್ರಮ ಕೈಗೊಳ್ಳಿ. ವಿದ್ಯುತ್ ವೈರ್/ಕಂಬ ಹಾಗೂ ವಿದ್ಯುತ್ ಪರಿವರ್ತಕಗಳನ್ನು ಸ್ಥಳಾಂತರಿಸುವುದು, ಪೆನ್ಸಿಂಗ್ ಅಳವಡಿಸುವುದು, ಜೋತು ಬಿದ್ದಿರುವ ವೈರ್ಗಳನ್ನು ಬಿಗಿಯುವುದು ಸೇರಿದಂತೆ ವಿದ್ಯುತ್ಗೆ ಸಂಬಂಧಿಸಿದಂತೆ ಯಾವುದೇ ದುರಸ್ತಿ ಕಾರ್ಯಗಳಿದ್ದಲ್ಲಿ ಸಂಬಂಧಿಸಿದ ಜೆಸ್ಕಾಂ ಅಧಿಕಾರಿಗಳು ಕೂಡಲೇ ಅವುಗಳ ಕುರಿತು ಕ್ರಮ ಕೈಗೊಳ್ಳಿ ಎಂದು ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂತರ್ಿ ಮಾತನಾಡಿ ವಸತಿ ನಿಲಯಗಳಲ್ಲಿ ಶುದ್ಧ ಹಾಗೂ ಗುಣಮಟ್ಟದ ಆಹಾರ ನೀಡುವುದು ಎಷ್ಟು ಮುಖ್ಯವೋ ಅಷ್ಟೇ ಮಕ್ಕಳ ಸಂಪೂರ್ಣ ಜವಾಬ್ದಾರಿಯೂ ನಿಲಯದ ಮೇಲ್ವಿಚಾರಕರದ್ದಾಗಿರುತ್ತದೆ. ವಸತಿ ನಿಲಯ ಹಾಗೂ ವಸತಿ ಶಾಲೆಗಳ ಆಹಾರ, ಸ್ವಚ್ಚತೆ, ವಿದ್ಯುತ್ ಸೌಲಭ್ಯ ಸೇರಿದಂತೆ ಮುಂತಾದ ಅಗತ್ಯ ಮೂಲಭೂತ ಸೌಕರ್ಯಗಳ ಕುರಿತು ವರದಿಯನ್ನು ಸಿದ್ಧಪಡಿಸಿ ಪ್ರತಿ ತಿಂಗಳೂ ವಸತಿ ನಿಲಯದ ಮೇಲ್ವಿಚಾರಕರ ಸಹಿಯೊಂದಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಬೇಕು. ವಸತಿ ನಿಲಯದಲ್ಲಿ ಯಾವುದಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಕೂಡಲೇ ಮೇಲಾದಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಸಿ.ಡಿ ಗೀತಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿದರ್ೇಶಕ ಬಿ. ಕಲ್ಲೇಶ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈರಪ್ಪ ಆಶಾಪೂರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್ ಸೇರಿದಂತೆ ಜೆಸ್ಕಾಂ ಅಧಿಕಾರಿಗಳು ಹಾಗೂ ಎಲ್ಲಾ ವಸತಿ ನಿಲಯಗಳ ಮೇಲ್ವಿಚಾರಕರು ಮತ್ತು ವಸತಿ ಶಾಲೆಗಳ ಪ್ರಾಚಾರ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.