ಕೊಪ್ಪಳ: ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಕರೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆ ಒಳಾಂಗಣ (ಹಳೇ ನಿರ್ದೇಶಕರ ಕಛೇರಿ ಹತ್ತಿರ) ದಲ್ಲಿ ಗುರುವಾರದಂದು (ಸೆ.26) ಆಯೋಜಿಸಲಾಗಿದ್ದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ'' ಪಾಕ್ಷೀಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯು ರಾಜ್ಯ ಸಕರ್ಾರ ಹಾಗೂ ಕೇಂದ್ರ ಸಕರ್ಾರಗಳ ಸಂಯೋಜಿತ ಯೋಜನೆಯಾಗಿದ್ದು, 2018ರ ಅಕ್ಟೋಬರ್. 30ರಿಂದ ಜಾರಿಯಲ್ಲಿರುತ್ತದೆ. ಈ ಯೋಜನೆಯಡಿ ಫಲಾನುಭವಿಗಳನ್ನು ಅರ್ಹತಾ ರೋಗಿ (ಬಿಪಿಎಲ್) ಮತ್ತು ಸಾಮಾನ್ಯ ರೋಗಿ (ಎಪಿಎಲ್) ಎಂದು ವಿಂಗಡಿಸಲಾಗಿದೆ. ಬಿಪಿಎಲ್ ಕುಟುಂಬದವರಿಗೆ ಒಂದು ವರ್ಷಕ್ಕೆ ರೂ. 5ಲಕ್ಷವರೆಗಿನ ಚಿಕಿತ್ಸೆ ಒದಗಿಸಲಾಗುವುದು. ಎಪಿಎಲ್ ಕುಟುಂಬದವರಿಗೆ ಪ್ಯಾಕೇಜ್ ದರದ ಶೇ.30%ರಷ್ಟು ವಿನಾಯಿತಿ ಇದ್ದು, ಸಹಪಾವತಿ ಆಧಾರದ ಮೇಲೆ ವಾಷರ್ಿಕ ಮಿತಿ ರೂ. 1.50 ಲಕ್ಷ ಇರುತ್ತದೆ. ಈ ಸಂಯೋಜಿತ ಯೋಜನೆಯಲ್ಲಿ 1650 ಚಿಕಿತ್ಸಾ ವಿಧಾನಗಳು ಒಳಗೊಂಡಿರುತ್ತದೆ. ಸರಳ ದ್ವಿತೀಯ ಹಂತದ 291 ಹಾಗೂ 36 ಸರಳ ಸಾಮಾನ್ಯ ದ್ವಿತೀಯ ಹಂತದ ಚಿಕಿತ್ಸೆಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ನೀಡಲಾಗುತ್ತದೆ. ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ತೃತೀಯ ಹಂತದ 900 ಚಿಕಿತ್ಸೆ ವಿಧಾನಗಳು, 169 ತುತರ್ು ಚಿಕಿತ್ಸಾ ವಿಧಾನಗಳು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತದೆ. ಸಕರ್ಾರಿ ಆಸ್ಪತ್ರೆಯಲ್ಲಿ ಕ್ಲಿಷ್ಟಕರ ದ್ವಿತೀಯ ಹಂತದ ಮತ್ತು ತೃತೀಯ ಹಂತದ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ಉನ್ನತ ದಜರ್ೆಯ ಸರಕಾರಿ ಆಸ್ಪತ್ರೆಗಳಿಗೆ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಲಾಗುತ್ತದೆ. ರಸ್ತೆ ಅಪಘಾತ ಸೇರಿದಂತೆ ಇನ್ನಿತರ ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೇ ನೋಂದಾಯಿತ ಆಸ್ಪತ್ರೆಗಳಿಗೆ ನೇರವಾಗಿ ಹೋಗಿ ಚಿಕಿತ್ಸೆ ಪಡೆಯಬಹುದು. ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 61 ಸರಕಾರಿ ಆಸ್ಪತ್ರೆಗಳು ಈ ಯೋಜನೆಯಡಿ ನೋಂದಾಯಿತವಾಗಿವೆ. ಈ ಯೋಜನೆಯಡಿ ಎ.ಬಿ-ಎ.ಆರ್.ಕೆ ಹೆಲ್ತ್ ಕಾಡರ್್ಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ರೂ. 10/- ಶುಲ್ಕ ನೀಡಿ ಪಡೆಯಬಹುದು ಮತ್ತು ಕನರ್ಾಟಕ ಒನ್ ಕೇಂದ್ರಗಳಲ್ಲಿ ರೂ.35/- ಶುಲ್ಕ ನೀಡಿ ಪಡೆಯಬಹುದು. ಹೆಲ್ತ್ ಕಾರ್ಡ ಇಲ್ಲದಿದ್ದರೂ ಸಹ ಪಡಿತರ ಚೀಟಿ, ಆಧಾರ್ ಕಾಡರ್್ನ್ನು ಹಾಜರುಪಡಿಸಿ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಸಾರ್ವಜನಿಕರ ಸಕರ್ಾರದ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕೊಪ್ಪಳ ಕಿಮ್ಸ್ ನಿರ್ದೇಶಕ ದತ್ತಾತ್ರೇಯ ಡಿ. ಭಂಟ ಅವರು ಮಾತನಾಡಿ, ``ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾ ಟಕ ಯೋಜನೆ'' ಅಡಿಯಲ್ಲಿ ಇಲ್ಲಿಯವರೆಗೆ ಕೊಪ್ಪಳ ಜಿಲ್ಲೆಯಲ್ಲಿ 1,15,134 ಎ.ಬಿ-ಎ.ಆರ್.ಕೆ ಹೆಲ್ತ್ ಕಾರ್ಡಗಳನ್ನು ವಿತರಿಸಲಾಗಿದೆ. ಇದರಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 6365, ಕರ್ನಾಟಕ-ಒನ್ ಕೇಂದ್ರಗಳಲ್ಲಿ 3207 ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ 1,05,562 ಕಾರ್ಡಗಳನ್ನು ವಿತರಿಸಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಈ ಯೋಜನೆಯಡಿ 5199 ಫಲಾನುಭವಿಗಳು ಚಿಕಿತ್ಸೆ ಪಡೆದಿರುತ್ತಾರೆ. ಇದಕ್ಕಾಗಿ ಒಟ್ಟು 2,27,62,008 ರೂಪಾಯಿಗಳು ಸರಕಾರದಿಂದ ನೋಂದಾಯಿತ ಸರಕಾರಿ ಆಸ್ಪತ್ರೆಗಳಿಗೆ ಭರಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಕುಮಾರ್ ಯರೆಗಲ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್.ಬಿ ದಾನರೆಡ್ಡಿ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕೊಪ್ಪಳ ನೂಡಲ್ ಅಧಿಕಾರಿ ಹಾಗೂ ಡಿ.ಎಲ್.ಓ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಮಾನ್ವಿ ಪಾಶಾ, ಇಂದಿರಾ ಬಾವಿಕಟ್ಟಿ, ಮಹಾಂತೇಶ ಚಾಕ್ರಿ ಸೇರಿದಂತೆ ಡಾ. ಎಸ್.ಕೆ ದೇಸಾಯಿ, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಜಂಬಯ್ಯ, ತಾಲ್ಲೂಕ ಆರೋಗ್ಯಾಧಿಕಾರಿಗಳು, ಸವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಜಿಲ್ಲಾ ಸಂಯೋಜಕರು ಹಾಗೂ ಜಿಲ್ಲೆಯ ಎಲ್ಲಾ ಆರೋಗ್ಯ ಮಿತ್ರರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.