ಲೋಕದರ್ಶನವರದಿ
ಬ್ಯಾಡಗಿ: ಸಾಮಾಜಿಕವಾಗಿ ದುರ್ಬಲ ವರ್ಗದವರು, ಮಹಿಳೆಯರು, ಮಕ್ಕಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಾಷರ್ಿಕವಾಗಿ ಒಂದು ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿರುವ ಎಲ್ಲಾ ವರ್ಗದ ಜನರಿಗೆ ಉಚಿತ ಕಾನೂನು ಸೇವೆಗಳನ್ನು ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ವತಿಯಿಂದ ಒದಗಿಸಲಾಗುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ದಿವಾಣಿ ನ್ಯಾಯಾಧೀಶರಾದ ಇಬ್ರಾಹಿಂ ಎಂ ಮುಜಾವರ್ ಅವರು ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿರುವ ಸಭಾಭವನದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ನ್ಯಾಯವಾದಿಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ' ಅಂಗವಾಗಿ ಮಂಗಳವಾರ ಆಯೋಜಿಸಲಾಗಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ನ್ಯಾಯಾಲಯದ ಆವರಣದಲ್ಲಿ ಉಚಿತ ಕಾನೂನು ಸಲಹಾ ಕಾನೂನು ಸೇವಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು ಅನುಭವಿ ನ್ಯಾಯವಾದಿಗಳನ್ನು ಇಲ್ಲಿ ನಿಯೋಜಿಸಲಾಗಿದೆ. ಸಾರ್ವಜನಿಕರಿಗೆ ಕಾನೂನಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಅಥವಾ ಸಂದೇಹಗಳಿದ್ದಲ್ಲಿ ಸದರಿ ನ್ಯಾಯವಾದಿಗಳನ್ನು ಸಂಪಕರ್ಿಸಿ ಉಚಿತವಾಗಿ ಕಾನೂನು ಸಲಹೆಯನ್ನು ಪಡೆಯಬಹುದಾಗಿದ್ದು ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಪ್ಯಾನಲ್ ನ್ಯಾಯವಾದಿಗಳಾದ ಎಮ್. ಎ. ಅಗಸರ ಹಾಗೂ ಎಚ್. ಎಸ್. ಜಾಧವ ಮಾತನಾಡಿ, 'ಪೊಲೀಸ್ ದೌರ್ಜನ್ಯ ದೂರು ಪ್ರಾಧಿಕಾರದ ಕುರಿತು' ಹಾಗೂ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ವತಿಯಿಂದ ಸಾರ್ವಜನಿಕರಿಗೆ ಲಭ್ಯವಿರುವ ಉಚಿತ ಕಾನೂನು ಸೇವೆಗಳ ಕುರಿತು ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಕಿರಿಯ ದಿವಾಣಿ ನ್ಯಾಯಾಧೀಶರಾದ ರಾಜೇಶ ಹೊಸಮನೆ ಆಗಮಿಸಿದ್ದರು. ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಎಸ್ ಎಸ್ ಶೆಟ್ಟರ್, ನ್ಯಾಯವಾದಿಗಳಾದ ಎಫ್ ಎಂ ಮುಳಗುಂದ, ಭಾರತಿ ಕುಲಕಣರ್ಿ, ಸಿ ಪಿ ದೊಣ್ಣೇರ, ನ್ಯಾಯವಾದಿಗಳ ಸಂಘದ ಸದಸ್ಯರು, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.