ಮಕ್ಕಳ ಆರೋಗ್ಯ ಬಗ್ಗೆ ಕಾಳಜಿ ವಹಿಸಿ
Take care of children's health
ಹೂವಿನ ಹಡಗಲಿ 20: ವಿಶೇಷ ಅಗತ್ಯಯುಳ್ಳ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಹೇಳಿದರು. ಪಟ್ಟಣದ ಸೊಪ್ಪಿನ ವೀರಮ್ಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ 2025-26 ನೇ ಸಾಲಿನ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿ ದೈಹಿಕ ನ್ಯೂನತೆ ಹೊಂದಿರುವ ಮಕ್ಕಳಿಗೆ ಆರೋಗ್ಯ ಇಲಾಖೆಯ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.ಡಾ ಕೀರ್ತಿ ನೇತ್ರ ತಜ್ಞರು,ಡಾ ಮನ್ಸೂರ್ ಅಹಮದ್ ಇ ಎನ್ ಟಿಡಾ ಅಚ್ಯುತ ನಾಯಕ ಕೀಲು ಮತ್ತು ಮೂಳೆ ತಜ್ಞರು ಡಾ ಬಿ ಎಸ್ ವೇದಮೂರ್ತಿ ವಿಶೇಷ ಅಗ್ಯತತೆಯುಳ್ಳ ಮಕ್ಕಳ ತಪಾಸಣೆ ನಡೆಸಿದರು.ತಾಲೂಕಿನ ವಿವಿಧ ಶಾಲೆಗಳ 160 ಕ್ಕೂ ಹೆಚ್ಚು ವಿಶೇಷ ಅಗತ್ಯತೆಯುಳ್ಳ ಮಕ್ಕಳು ವೈದ್ಯಕೀಯ ಶಿಬಿರದ ಪ್ರಯೋಜನ ಪಡೆದುಕೊಂಡರು.ಬಿ ಆರ್ ಪಿ ಬಸವರಾಜ ಸಚಿನ್ ಆರಾಧ್ಯ, ಹೊನ್ನಪ್ಪ ಸಮೀರ್ ಇತರರು ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 