ಘನ ತ್ಯಾಜ್ಯ ನಿರ್ವಹಣಾ ನಿಯಮ 2026ರ ಪರಿಣಾಮಕಾರಿ ಅನುಷ್ಟಾನಕ್ಕೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
Take steps for effective implementation of Solid Waste Management Rules 2026: Deputy Commissioner C.
ಲೋಕದರ್ಶನ ವರದಿ
ಗದಗ 20: ಕೇಂದ್ರ ಸರ್ಕಾರದಿಂದ ಜಾರಿಗೆ ಬಂದಿರುವ ಹೊಸ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು 2026 ನಿಯಮಗಳ ಪರಿಣಾಮಕಾರಿ ಅನುಷ್ಟಾನಕ್ಕೆ ಹಾಗೂ ಪರಿಸರ ಸಂರಕ್ಷಣೆಗೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳ ಸಹಭಾಗಿತ್ವ ಹಾಗೂ ಕಾರ್ಯತತ್ಪರತೆ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಘನತ್ಯಾಜ್ಯ ನಿರ್ವಹಣೆ ನಿಯಮಗಳು 2026 ರ ಅನುಷ್ಟಾನದ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಘನ ತ್ಯಾಜ್ಯ ವಸ್ತುಗಳ ನಿಯಮಗಳು-2026 ರ ಅನ್ವಯ ಜಿಲ್ಲೆಯ ಎಲ್ಲ ಸಾರ್ವಜನಿಕರು, ಮನೆಗಳು ಹಾಗೂ ವ್ಯಾಪಾರೋದ್ಯಮಿಗಳು ತಮ್ಮ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಸವನ್ನು ಕಡ್ಡಾಯವಾಗಿ ನಾಲ್ಕು ವಿಭಾಗಗಳಾಗಿ ವಿಂಗಡಿಸಿ ನಗರಸಭೆಯ ಕಸ ಸಂಗ್ರಹಣಾ ವಾಹನಗಳಿಗೆ ನೀಡಬೇಕು.
ಕಸವನ್ನು ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ, ವಿಶೇಷ ಕಾಳಜಿ ತ್ಯಾಜ್ಯ ಎಂದು ಪ್ರತ್ಯೇಕಿಸಬೇಕಾಗುತ್ತದೆ. ಅಡುಗೆ ಮನೆಯ ತ್ಯಾಜ್ಯ, ತರಕಾರಿ, ಮಾಂಸದ ತ್ಯಾಜ್ಯ, ಹಣ್ಣು ಹೂವು, ಹಾಗೂ ಕೊಳೆಯುವ ವಸ್ತುಗಳನ್ನು ಹಸಿ ತ್ಯಾಜ್ಯದ ವಿಭಾಗದಲ್ಲೂ, ಪ್ಲಾಸ್ಟಿಕ್, ಬಟ್ಟೆ, ಕಬ್ಬಿಣ, ರಬ್ಬರ್ ಮತ್ತು ಮರದ ವಸ್ತುಗಳನ್ನು ಒಣ ತ್ಯಾಜ್ಯದ ವಿಭಾಗದಲ್ಲೂ ನೀಡಬೇಕು. ಡೈಪರ್ಸ, ಸ್ಯಾನಿಟರಿ ನ್ಯಾಪಕಿನ್ ಗಳಂತಹ ವಸ್ತುಗಳನ್ನು ಸ್ಯಾನಿಟರಿ ತ್ಯಾಜ್ಯ ಎಂದು ಪ್ರತ್ಯೇಕಿಸಬೇಕು. ಇನ್ನುಳಿದಂತೆ ಪೇಂಟ್ ಡಬ್ಬಗಳು, ಓಷಧ ಬಾಟಲಿಗಳು, ಇ ವೇಸ್ಟ್ , ಬಲ್ಬ್ , ಹಳೆಯ ಬ್ಯಾಟರಿ ಹಾಗೂ ಬಳಸಿದ ಸಿರಿಂಜ್ ಮತು ಬ್ಯಾಂಡೇಜ್‌ಗಳನ್ನು ವಿಶೇಷ ತ್ಯಾಜ್ಯದ ಅಡಿಯಲ್ಲಿ ನೀಡಲು ಸೂಚಿಸಲಾಗಿದೆ ಎಂದರು .
ಜಿಲ್ಲೆಯಲ್ಲಿ ಬಲ್ಕ ವೇಸ್ಟ್ ಜನರೇಟರ್ (ಬೃಹತ್ ಕಸ ಉತ್ಪಾದಕರನ್ನು) ಗುರುತಿಸಬೇಕು. ದಿನಕ್ಕೆ 100 ಕೆಜಿ ಗಿಂತ ಹೆಚ್ಚು ಕಸ ಉತ್ಪಾದಿಸುವ ಅಥವಾ ಪ್ರತಿ ನಿತ್ಯ 40000 ಲೀಟರ್ ಗಿಂತ ಹೆಚ್ಚು ನೀರು ಬಳಸುವ / 20 ಸಾವಿರ ಚದರ ಮೀಟರ್‌ಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ಸಂಸ್ಥೆಗಳು ಈ ನಿಯಮದಡಿ ಬರುತ್ತವೆ. ಹಾಸ್ಟೆಲ್‌ಗಳು, ಮಾಲ್‌ಗಳು, ರೆಸ್ಟೋರೆಂಟ್‌ಗಳು, ಕಲ್ಯಾಣ ಮಂಟಪಗಳು, ಅಪಾರ್ಟ್‌ಮೆಂಟ್‌ಗಳು ಇದರ ವ್ಯಾಪ್ತಿಗೆ ಬರುತ್ತಿದ್ದು ಅಂತಹವುಗಳನ್ನು ಗುರುತಿಸಿ ಕಡ್ಡಾಯವಾಗಿ ವೆಬ್‌ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಬೇಕು. ಹೊಸ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು 2026 ಹಾಗೂ ವಿಲೇವಾರಿ ಕುರಿತು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್ 