ಬೀಡಾಡಿ ದನಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಿ: ಗೋಡಬೋಲೆ
Take steps to prevent accidents caused by stray cattle: Godabole
ಬೀಡಾಡಿ ದನಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಿ: ಗೋಡಬೋಲೆ
ಕಾರವಾರ, ಸೆ.10: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಬೀಡಾಡಿ ದನಗಳಿಂದ ಆಗುತ್ತಿರುವ ಅಪಘಾತಗಳನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಮತ್ತು ರಾಜ್ಯ ಹೆದ್ದಾರಿಗೆ ಸಂಬಂದಪಟ್ಟ ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ನ ಆಡಳಿತಾಧಿಕಾರಿ ಸುಷಮಾ ಗೋಡಬೋಲೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಟ್ಕಳದಿಂದ ಮಾಜಾಳಿ ವರೆಗಿನ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಕಂಡು ಬರುವ ಬೀಡಾಡಿ ದನಗಳಿಂದ ಹೆಚ್ಚಿನ ಸಂಖ್ಯೆಯ ವಾಹನ ಅಪಘಾತಗಳು ಸಂಭವಿಸುತ್ತಿದ್ದು ಈ ಅಪಘಾತಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು , ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಭಟ್ಕಳ-ಮುರುಡೇಶ್ವರ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ರಕ್ಷಣೆಗೆ ಗೋಶಾಲೆ ನಿರ್ಮಿಸಿ,ಅದನ್ನು ನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ಮತ್ತು ಕಣಸಗಿರಿಯಲ್ಲಿ ಈಗಾಗಲೆ ತೆರದಿರುವ ಗೋಶಾಲೆಯ ಸಂಪೂರ್ಣ ನಿರ್ವಹಣೆಯನ್ನು ಮಾಡುವಂತೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುವ ಸ್ಥಳಗಳನ್ನು ಪೊಲೀಸ್ ಇಲಾಖೆಯ ಮೂಲಕ ಗುರುತಿಸಿ, ಅಪಘಾತ ಸಂದರ್ಭದಲ್ಲಿ ಆ ಪ್ರದೇಶಗಳಿಗೆ ತ್ವರಿತವಾಗಿ ತೆರಳಲು ಅನುಕೂಲವಾಗುವಂತೆ ಸಮೀಪದ ಪ್ರದೇಶದಲ್ಲಿ ತಮ್ಮ ಆಂಬುಲೆನ್ಸ್ ನ್ನು ನಿಯೋಜಿಸುವಂತೆ ಮತ್ತು ರಾತ್ರಿಯ ವೇಳೆಯಲ್ಲಿ ಹೆದ್ದಾರಿ ಗಸ್ತು ವಾಹನದ ಮೂಲಕ ಬೀಡಾದಿ ದನಗಳನ್ನು ಹೆದ್ದಾರಿಯಿಂದ ಸುರಕ್ಷಿತ ಸ್ಥಳಗಳಿಗೆ ಓಡಿಸಲು ಕ್ರಮ ಕೈಗೊಳ್ಳಬೇಕು, ಹೆದ್ದಾರಿಯಲ್ಲಿ ವಾಹನಗಳಿಂದ ಅಪಘಾತವಾಗಿ ನರಳುವ ದನಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಅಪಘಾತಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಸೂಚಿಸುವ ಸ್ಥಳಗಳಲ್ಲಿ ಹೈ ಮಾಸ್ಟ್ ದೀಪಗಳನ್ನು ಅಳವಡಿಸಬೇಕು, ರಂಬ್ಲರ್ಸಗಳು, ಸ್ಪೀಡ್ ಬ್ರೇಕರ್‌ಗಳು, ಕ್ಯಾಮೆರಾಗಳನ್ನ್ನು ಮತ್ತು ಸೂಚನಾ ಫಲಕಗಳನ್ನು ಅಳವಡಿಸುವಂತೆ ಸೂಚಿಸಿದ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತಗಳಿಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೇ ಪ್ರಮುಖ ಜವಾಬ್ದಾರರು ಎಂಬುದನ್ನು ಗಮನದಲ್ಲಿಟ್ಟುಕೊಂಡು ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದರು.
ಅಂಕೋಲ ದಿಂದ ಯಲ್ಲಾಪುರ ಹೋಗುವ ರಸ್ತೆಯು ತುಂಬಾ ಹಾಳಾಗಿದ್ದು ಇಲ್ಲಿನ ರಸ್ತೆ ದುರವಸ್ಥೆ ಬಗ್ಗೆ ಸಾಕಷ್ಟು ಸಂಖ್ಯೆಯಲ್ಲಿ ದೂರುಗಳು ಬರುತ್ತಿದ್ದು , ಪ್ರಸ್ತುತ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಕೂಡಲೇ ಇಲ್ಲಿನ ರಸ್ತೆಗಳಲ್ಲಿನ ಪಾಟ್ ಹೋಲ್‌ಗಳನ್ನು ಹಾಗೂ ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿನ ಪಾಟ್ ಹೋಲ್ ಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಮತ್ತು ರಾಜ್ಯ ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಶಿರಸಿ-ಕುಮಟಾ ರಸ್ತೆ ಕಾಮಗಾರಿಯನ್ನು ಅವಧಿಯೊಳಗೆ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚಿಸಿದರು.
ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯಲ್ಲಿ ಬೀಡಾಡಿ ದನಗಳಿಂದ ಅಪಘಾತವಾಗುವುದನ್ನು ತಡೆಯಲು, ಅವುಗಳ ಕುತ್ತಿಗೆಗೆ ರೇಡಿಯಂ ಕಾಲರ್ ಅಳವಡಿಕೆ, ಕೊಂಬುಗಳಿಗೆ ರೇಡಿಯಂ ಅಳವಡಿಕೆ ಕುರಿತಂತೆ ಹಾಗೂ ಇವುಗಳನ್ನು ಗೋಶಾಲೆಗಳಿಗೆ ಸ್ಥಳಾಂತರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ತರಬೇತಿ ನಿರತ ಐ.ಎ.ಎಸ್.ಅಧಿಕಾರಿ ಝೂಫಿಷಾನ್ ಹಕ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 