ವಿಶೇಷ ಘಟಕ ಯೋಜನೆಯ ಅನುದಾನ ಲ್ಯಾಪ್ಸ್‌ ಆಗದಂತೆ ಕ್ರಮವಹಿಸಿ - ಸುನೀಲ್ ಉಕ್ಕಲಿ

ವಿಶೇಷ ಘಟಕ ಯೋಜನೆಯ ಅನುದಾನ ಲ್ಯಾಪ್ಸ್‌ ಆಗದಂತೆ  ಕ್ರಮವಹಿಸಿ - ಸುನೀಲ್ ಉಕ್ಕಲಿ Take steps to prevent lapse of Special Unit Project funds - Sunil Ukkali

ಲೋಕದರ್ಶನ ವರದಿ 

ವಿಜಯಪುರ 05:  ವಿಶೇಷ ಘಟಕ ಯೋಜನೆ ಅನುದಾನ ಲ್ಯಾಪ್ಸ್‌ ಆಗದಂತೆ ನಿಗದಿತ ಅವಧಿಯಲ್ಲಿ ಕ್ರಿಯಾಯೋಜನೆಯನ್ವಯ ಕ್ರಮವಹಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರಾದ  ಸುನೀಲ ಉಕ್ಕಲಿ ಅವರು ಹೇಳಿದರು. 

ಗುರುವಾರ ನಗರದ ನೂತನ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ವಿಶೇಷ ಘಟಕ ಯೋಜನೆಗೆ ಒಳಪಡುವ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಮತನಾಡಿದರ ಅವರು, 2025-26ನೇ ಸಾಲಿನ ವಿಶೇಷ ಘಟಕ ಯೋಜನೆಗೆ ಸಂಬಂಧಿಸಿದ ಪ್ರಗತಿ ಮಾಹಿತಿಯನ್ನು ಪಡೆದುಕೊಂಡ ಅವರು, ಕೃಷಿ ಇಲಾಖೆ, ಕೈಗಾರಿಕೆ ಇಲಾಖೆ, ಹೆಸ್ಕಾಂ, ಕಾರ್ಮಿಕ ಇಲಾಖೆ, ಆಯುಷ್ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆಯ ಪ್ರಗತಿ ಪರೀಶೀಲನೆ ನಡೆಸಿದರು. 

ಫಲಾನುಭವಿಗಳ ಯೋಜನೆವಾರು ಮಾಹಿತಿ ಪರೀಶೀಲಿಸಿ, ನಿಗದಿಪಡಿಸಿರುವ ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಬೇಕು. ಯೋಜನೆಯನ್ನು ನೈಜ ಫಲಾನುಭವಿಗಳಿಗೆ ತಲುಪಿಸಿ, ಅನುದಾನ ಲ್ಯಾಪ್ಸ್‌ ಆಗದಂತೆ  ನೋಡಿಕೊಳ್ಳಬೇಕು.ಸರ್ಕಾರದ ಆಶಯಕ್ಕೆ ಪೂರಕವಾಗಿ ಕ್ರಮವಹಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಿಸಿಕೊಡಬೇಕು ಎಂದು ಹೇಳಿದರು. 

ಎಲ್ಲಾ ಇಲಾಖೆಗೆ ಬಿಡುಗಡೆಯಾಗುವ ಅನುದಾನವನ್ನು ನಿಗಧಿತ ಅವಧಿಯಲ್ಲಿ ಸಂಪೂರ್ಣವಾಗಿ ಹಾಗೂ ಸಮರ​‍್ಕವಾಗಿ ಅನುದಾನ ಬಳಸಿ ವರದಿ ಸಲ್ಲಿಸಲು ಸೂಚಿಸಿದರು. ನಿಗಧಿತ ಅವಧಿಯಲ್ಲಿ ಯೋಜನೆಯನ್ವಯ ಪೂರ್ಣ ಪ್ರಮಾಣದ ಅನುದಾನ ಬಳಸಲು ವಿಫಲರಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಆಯೋಗದಿಂದ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. 

ವಿಜಯಪುರ ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿ, 2025-26ನೇ ಸಾಲಿನ ವಿಶೇಷ ಘಟಕ ಯೋಜನೆಗೆ ಸಂಬಂದಿಸಿದ ಪ್ರಗತಿ ಮಾಹಿತಿಯನ್ನು ಮಹಾನಗರ ಪಾಲಿಕೆ ಆಯುಕ್ತರಿಂದ  ಪಡೆದುಕೊಂಡರು. ಫಲಾನುಭವಿಗಳ ಯೋಜನೆವಾರು ಮಾಹಿತಿ ಪರೀಶೀಲಿಸಿ, ನಿಗದಿಪಡಿಸಿರುವ ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.  

ಈ ಸಂದರ್ಭದಲ್ಲಿ  ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಪಾಲಿಕೆ ಆರೋಗ್ಯಾಧಿಕಾರಿಗಳಾದ ಎಸ್ ಎಲ್ ಲಕ್ಕಣ್ಣವರ, ಸಮಾಜ ಕಲ್ಯಾಣ ಇಲಾಖೆಯ ಅಧಿಕ್ಷಕರಾದ ಅರವಿಂದ ಲಂಬು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಜಿ.ಇಂಡಿ, ಸಮಾಜ ಕಲ್ಯಾಣ ಇಲಾಖೆಯ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.