ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ Take the problems of Scheduled Castes and Scheduled Tribes people seriously

                      ರಾಯಬಾಗ   20: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ನ್ಯಾಯಯುತವಾಗಿ ಶೀಘ್ರವಾಗಿ ಬಗೆಹರಿಸುವಂತೆ ಶಾಸಕ ಡಿ.ಎಮ್‌.ಐಹೊಳೆಯವರು ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ಮಧ್ಯಾಹ್ನ ಪಟ್ಟಣದ ಡಾ.ಬಾಬು ಜಗಜೀವನರಾಂ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಜನರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು.ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಸಭೆಯಲ್ಲಿ ಮಾತನಾಡಿ, ಎಸ್‌.ಸಿ,ಎಸ್‌.ಟಿ ಬಡ ವಸತಿ ರಹಿತ ಕುಟುಂಬದವರಿಗೆ ಮನೆ ಕಟ್ಟಡ ನಿರ್ಮಾಣಕ್ಕಾಗಿ ವಿವಿಧ ಯೋಜನೆಯಡಿ ನೀಡುವ ಸಹಾಯ ಧನವನ್ನು ರೂ.5 ಲಕ್ಷ ವರೆಗೆ ಹೆಚ್ಚಿಸಿ ಬರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿರುವುದಾಗಿ ತಿಳಿಸಿದರು.

                    ತಮ್ಮ ಇಲಾಖೆ ವ್ಯಾಪ್ತಿಗೆ ಬರುವ ದಲಿತರ ಸಮಸ್ಯೆಗಳನ್ನು ಬಗೆಹರಿಸಬೇಕಾದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಕದ್ದು ಅವರು, ಪ್ರತಿಯೊಂದು ಉಡಾಫೆ ಉತ್ತರ ನೀಡಿ, ಸಬೂಬು ಹೇಳುವುದನ್ನು ದಲಿತ ಮುಖಂಡರು ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿದರು.ರಾಯಬಾಗ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕ್ಕಮಕ್ಕಳ ಮತ್ತು ಸ್ತ್ರೀ ರೋಗ ತಜ್ಞ ವೈದ್ಯರು ಇಲ್ಲದಿರುವುದರಿಂದ ಬಡ ದಲಿತ ರೋಗಿಗಳಿಗೆ ತುಂಬ ತೊಂದರೆ ಆಗುತ್ತಿದ್ದು, ಕೂಡಲೇ ವೈದ್ಯರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆ ಮುಖಂಡರು ಆಗ್ರಹಿಸಿದರು.ಹಾರೂಗೇರಿ ಪಟ್ಟಣದಲ್ಲಿ ದಲಿತ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್ ಅವರು ಇನ್ನುವರೆಗೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

                  ರಾಯಬಾಗ ಮತ್ತು ಕುಡಚಿ ಎರಡು ಮೀಸಲು ಮತಕ್ಷೇತ್ರ ಇದ್ದು,  ಎಸ್‌.ಸಿ.,ಎಸ್‌.ಟಿ ಜನರ ಕುಂದು ಕೊರತೆ ಸಭೆಯನ್ನು ವರ್ಷಕ್ಕೆ ಒಮ್ಮೆ ಕಾಟಾಚಾರಕ್ಕೆ ಮಾಡದೇ, ಪ್ರತಿ 3 ತಿಂಗಳಿಗೆ ಸಭೆ ನಡೆಸಬೇಕೆಂದು ದಲಿತ ಮುಖಂಡರು ಒತ್ತಾಯಿಸಿದರು.ಪ್ರಾರಂಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಬೇಕಿದ್ದ ತಹಶೀಲ್ದಾರ ಮಹಾದೇವ ಸನಮುರಿ ಅವರು ಬರುವರೆಗೆ ಸಭೆಯನ್ನು ನಡೆಸಬಾರದು ಎಂದು ದಲಿತ ಮುಖಂಡರು ಪಟ್ಟು ಹಿಡಿದರು, ತಹಶೀಲ್ದಾರ ಬರೆವವರೆಗೆ ಇಬ್ಬರೂ ಶಾಸಕರು ಸ್ವಲ್ಪ ಹೊತ್ತು ಕಾಯುವಂತೆ ಆಯಿತು.ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ ಮಹಾದೇವ ಸನಮುರಿ ವಹಿಸಿದ್ದರು.

                  ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ (ಗ್ರೇಡ್‌-1) ವಿಠ್ಠಲ ಚಂದರಗಿ, ತಾ.ಪಂ.ಇಒ ಡಾ.ಸುರೇಶ ಕದ್ದು, ಉಪ ತಹಶೀಲ್ದಾರ ಪರಮಾನಂದ ಮಂಗಸೂಳಿ, ಬಿಇಒ ಬಸವರಾಜಪ್ಪ ಆರ್, ಪ.ಪಂ.ಮುಖ್ಯಾಧಿಕಾರಿ ಎಸ್‌. ಆರ್‌.ಮಾಂಗ, ಕೃಷಿ ಅಧಿಕಾರಿ ವಿನೋದ ಮಾವರಕರ, ಎಇಇ ಸುಭಾಷ ಭಜಂತ್ರಿ, ವಿ.ಬಿ.ಭಜಂತ್ರಿ, ಎಚ್‌.ಎಲ್‌.ಪೂಜಾರಿ, ಶಿವಕುಮಾರ ಡಿ, ಎಮ್‌.ಆರ್‌.ಪಾಟೀಲ, ಕಲ್ಪನಾ ಕಾಂಬಳೆ, ಭಾರತಿ ಕಾಂಬಳೆ ಹಾಗೂ ದಲಿತ ಮುಖಂಡರು ಇದ್ದರು.ಫೋಟೊ: 18 ರಾಯಬಾಗ 2ಫೋಟೊ ಶೀರ್ಷಿಕೆ: ರಾಯಬಾಗ: ಪಟ್ಟಣದ ಡಾ.ಬಾಬು ಜಗಜೀವನರಾಂ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಜನರ ಕುಂದು ಕೊರತೆ ಸಭೆಯಲ್ಲಿ ಶಾಸಕ ಡಿ.ಎಮ್‌.ಐಹೊಳೆ ಮಾತನಾಡಿದರು. ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ತಹಶೀಲ್ದಾರ ಮಹಾದೇವ ಸನಮುರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಚಂದರಗಿ, ತಾ.ಪಂ.ಇಒ ಡಾ.ಸುರೇಶ ಕದ್ದು ಇತರರು ಇದ್ದರು.