ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಪ್ರತಿಭಾ ಕಾರಂಜಿ ಸಹಕಾರಿ
Talent Fountain helps shape students' futures
ಕಂಪ್ಲಿ 24: ವಿದ್ಯಾರ್ಥಿಗಳ ಕಲಿಕೆಯ ಜತೆಗೆ ಪ್ರತಿಭೆಗಳಿಗೆ ಅವಕಾಶಗಳು ಒದಗಿಸಿದಾಗ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕಾರಿಯಾಗಲಿದೆ ಎಂದು ಬಿಎಸ್‌ವಿ ಸಂಸ್ಥೆಯ ಅಧ್ಯಕ್ಷ ಕಲ್ಗುಡಿ ವಿಶ್ವನಾಥ ಹೇಳಿದರು.ಪಟ್ಟಣದ ಬಿಎಸ್‌ವಿ ಶಾಲೆಯಲ್ಲಿ 8ನೇ ವಾರ್ಡಿನ ಸಮೂಹ ಸಂಪನ್ಮೂಲ ಕೇಂದ್ರದಿಂದ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಮತ್ತು ಕಲ್ಲೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಸನಕ್ಕೆ ಪ್ರತಿಭಾ ಕಾರಂಜಿ ಸಹಕಾರಿ ಯಾಗಿದೆ.
ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಪ್ರತಿಭಾ ಕಾರಂಜಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರದಲ್ಲಿ ವಿದ್ಯಾರ್ಥಿಗಳು ಸೋಲು ಗೆಲುವು ಎನ್ನದೆ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಇಂತಹ ಕಾರ್ಯಕ್ರಮದಿಂದ ವೇದಿಕೆಯ ಭಯ ಹೋಗಲಾಡಿಸಲು, ನಾಯಕತ್ವದ ಗುಣ, ಧೈರ್ಯಬೆಳೆಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದರುಸಿಆರ್‌ಪಿ ಗಂಗಾಧರ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಹ ನೀಡಿದಾಗ ಮಕ್ಕಳ ಭವಿಷ್ಯಕ್ಕೆ ದಾರೀದೀಪವಾಗುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಇಲ್ಲಿ ಮಕ್ಕಳು ವೈಯಕ್ತಿ ಮತ್ತು ಸಾಮೂಹಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಛದ್ಮವೇಷ ಸ್ಪರ್ಧೆಯಲ್ಲಿ ಶಾರದಾ ಶಾಲೆಯ 1ನೇ ತರಗತಿಯ ಲಕ್ಷಿತಾ ಇವರು ಆದಿಯೋಗಿ ಪಾತ್ರದಲ್ಲಿ ಗಮನ ಸೆಳೆದಳು. ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯೆ ಸುಜಾತ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ, ಇಸಿಒಗಳಾದ ರೇವಣ್ಣ, ಟಿ.ಎಂ.ಬಸವರಾಜ, ಎನ್‌ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗನಗೌಡ ಎಂ.ಎ, ಸಿಆರ್‌ಪಿಗಳಾದ ಕರುಣಾಕರ, ರೇಣುಕಾರಾಧ್ಯ, ಸಹ ಶಿಕ್ಷಕರಾದ ಸುನಿತಾ, ರುದ್ರ್ಪ, ಬಸವರಾಜ, ರಾಜು, ಶಾಮ್ ಸುಂದರ್, ಮಂಜುನಾಥ ಸೆರಿದಂತೆ ಅನೇಕರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 