ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಪೂರಕ: ಶಾಸಕ ಸಿದ್ದು ಸವದಿ
Talent Fountain is a supplement to the all-round development of children: MLA Siddu Savadi
ಜಮಖಂಡಿ 03: ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗಬೇಕಾದರೆ ಪ್ರತಿಭಾ ಕಾರಂಜಿಯಂತಹ ವೇದಿಕೆ ಅತ್ಯವಶ್ಯಕ. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಉತ್ತಮ ವೇದಿಕೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ತಾಲ್ಲೂಕಿನ ಮಧುರಖಂಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲ್ಲುಕಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಲೆ ಮರೆ ಕಾಯಿಯಂತಿರುವ ಪ್ರತಿಭಾನ್ವಿತರನ್ನು ಗುರುತಿಸುವ ಕಾರ್ಯವಾಗುತ್ತದೆ. ಅಂತ ಮಕ್ಕಳ ಪ್ರತಿಭೆಯನ್ನು ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಭಾಗವಹಿಸಲು ಶಿಕ್ಷಕರು ಪ್ರಯತ್ನಿಸಬೇಕು. ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ತಮ್ಮಲ್ಲಿ ಅಡಗಿರುವ ವಯಕ್ತಿಕ ವಿಭಾಗ, ಸಮೂಹಿಕ ಭಾಗವಹಿಸಲು ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಬಿಇಒ ಎ.ಕೆ. ಬಸಣ್ಣವರ ಮಾತನಾಡಿ, ಪ್ರತಿಭಾ ಕಾರಂಜಿ ಒಂದು ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆಯಾಗಿದೆ. ಓದು ಬರಹದಿಂದ ಜೀವನ ರೂಪಿಸಿದರೆ ಪ್ರತಿಭಾ ಕಾರಂಜಿಯಂತಹ ವೇದಿಕೆ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತದೆ. ನಿರ್ಣಾಯಕರು ಮಕ್ಕಳಿಗೆ ಅನ್ಯಾಯವಾಗದಹಾಗೆ ನ್ಯಾಯಯುತವಾದ ನೀರ್ಣಯಗಳನ್ನು ನೀಡಬೇಕು ಎಂದರು.
ವೇದಿಕೆಯಲ್ಲಿ ದುಂಡಯ್ಯಾ ಹಿಡಕಲ್, ಈರ್ಪ ಬಡಿಗೇರ, ಜಿಲ್ಲಾ ಅಧ್ಯಕ್ಷ ಬಸವರಾಜ ಬಾಗೆನ್ನವರ, ತಾಲ್ಲೂಕಾ ಅಧ್ಯಕ್ಷ ಸಿ.ಜಿ. ಕಡಕೋಳ, ನರಸಿಂಹ ಕಲ್ಲೋಳ್ಳಿ, ಪಂಚಾಕ್ಷರಿ ನಂದೇಶ, ಎ.ಬಿ. ಮಾಂಗ, ನಿರ್ಮಲಾ ಮಿರ್ಜಿ, ಸಂತೋಷ ತಳಕೇರಿ, ವಿಜಯಕುಮಾರ ಹಲಗಿಮನಿ, ಇತರರು ಇದ್ದರು. ಶಿಕ್ಷಕ ಪಿ.ಎಸ್. ಕಟ್ಟಿಮನಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು, ರಮೇಶ ಅವಟಿ ಸ್ವಾಗತಿಸಿದರು, ಡಬ್ಲೂ. ವಾಯ್. ಭಜಂತ್ರಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 