ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ಟ್ಯಾಲೆಂಟ್ ಹಂಟ್ ಪರೀಕ್ಷೆ: ಎಸ್. ಜಿ. ಪಾಟೀಲ್
Talent Hunt Exam for Children's Future Education: S. G. Patil
ಲೋಕದರ್ಶನ ವರದಿ
ಗದಗ 29: ಎಲ್ಲ ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಆದರೆ ಅವರಲ್ಲಿನ ಪ್ರತಿಭೆ ಗುರುತಿಸಿ, ಅದಕ್ಕೆ ಪೂರಕವಾಗಿ ಮಕ್ಕಳನ್ನು ಬೆಳಿಸಿದಾಗ ಮಾತ್ರ ಆ ಮಗು ಅದ್ಭುತ ಸಾಧನೆಯನ್ನು ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಶೈಕ್ಷಣಿಕವಾಗಿ ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿದೆ ಎಂದು ಆದಿಯೋಗಿ ಏಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಶ್ರೀಕಾಂತ ಜಿ. ಪಾಟೀಲ್ ಹೇಳಿದರು.
ಅವರು ಆದಿಯೋಗಿ ಏಜುಕೇಷನಲ್ ಟ್ರಸ್ಟ್ ವತಿಯಿಂದ ನಗರದ ಮೈಲಾರ್ಪ ಮೆಣಸಗಿ ಪಿಯು ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಏರಿ್ಡಸಿದ್ದ ಟ್ಯಾಲೆಂಟ್ ಹಂಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಮಕ್ಕಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ಅವರ ಭವಿಷ್ಯದ ಶಿಕ್ಷಣಕ್ಕೆ ಗಟ್ಟಿಯಾದ ಅಡಿಪಾಯ ಹಾಕಲು ನಮ್ಮ ಸಂಸ್ಥೆ ಟ್ಯಾಲೆಂಟ್ ಹಂಟ್ ಹೆಸರಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದೆ, ಪರೀಕ್ಷೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡಿ,ಪ್ರೋತ್ಸಾಹಿಸುವ ಕಾರ್ಯ ಮಾಡಲಾಗುತ್ತಿದೆ. ಇಂತಹ ಪರೀಕ್ಷೆ ಮೂಲಕ ಮಕ್ಕಳನ್ನು ಈ ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ಪ್ರಯತ್ನ ನಮ್ಮದಾಗಿದೆ ಎಂದರು.
ಪರೀಕ್ಷೆಯಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪವನಕುಮಾರ್ ಶೇಠ ಹಾಗೂ ಖಜಾಂಚಿ ಕುಮಾರ್ ರಾಥೋಡ್ ಟ್ಯಾಲೆಂಟ್ ಹಂಟ್ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 