ವಿಪ್ರ ಮಹಿಳಾ ಮಂಡಳದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Talent award program by Vipra Mahila Mandal
ಬೆಳಗಾವಿ 30: ವಿದ್ಯಾರ್ಥಿಗಳು ಮುಂದೆ ತಮ್ಮ ಜೀವನದಲ್ಲಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಡಾ. ನೀತಾ ರಾವ ಹೇಳಿದರು.
ವಿಪ್ರ ಮಹಿಳಾ ಮಂಡಳದಿಂದ ಸತ್ಯಪ್ರಮೋದ ಸಭಾಗೃಹದಲ್ಲಿ ದಿ. 28 ರಂದು ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಗವದ್ಗೀತೆಯ ಮಹತ್ವ ಹಾಗೂ ಅದನ್ನು ತಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕೆಂದು ಡಾ. ನೀತಾ ರಾವ ಅವರು ಹೇಳಿದರು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ ತೇರ್ಗಡೆಯಾದ ವಿಪ್ರ ಸಮಾಜದ 16 ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪುರಸ್ಕಾರ ನೀಡಲಾಯಿತು.
ಮಾಧುರಿ ಇನಾಮದಾರ ಭಗವದ್ಗೀತೆಯ ಎರಡನೇ ಅಧ್ಯಾಯ ಹೇಳಿದರು. ಶೀತಲ ರಾಜಪುರೋಹಿತ ಅವರ ಅರ್ಥ ವಿವರಣೆ ಮಾಡಿದರು. ವೀಣಾ ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಮೇಧಾ ಕುಲಕರ್ಣಿ ಅತಿಥಿಗಳ ಪರಿಚಯ ಮಾಡಿದರು. ವಿದ್ಯಾರ್ಥಿಗಳ ಪರಿಚಯ ಹಾಗೂ ಸನ್ಮಾನವನ್ನು ಹೇಮಾ ಕುಲಕರ್ಣಿ ಹಾಗೂ ವೈಶಾಲಿ ಕುಲಕರ್ಣಿ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಪಾಲಕರು ಹಾಗೂ ವಿದ್ಯಾರ್ಥಿಗಳು ಮುಖ್ಯ ಅತಿಥಿಗಳೊಂದಿಗೆ ಸಂವಾದದಲ್ಲಿ ಪಾಲ್ಗೊಂಡರು.
ಭಾಗ್ಯಶ್ರೀ ಕುಲಕರ್ಣಿ ವಂದಿಸಿದರು. ಅಶ್ವಿನಿ ಜೋಶಿ ಕಾರ್ಯಕ್ರಮ ನಿರೂಪಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 