ಎಸ್‌.ಎಸ್‌.ಎಲ್‌.ಸಿ ಹಾಗೂ ಪಿಯುಸಿ ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಎಸ್‌.ಎಸ್‌.ಎಲ್‌.ಸಿ ಹಾಗೂ ಪಿಯುಸಿ ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ Talent award program for SSLC and PUC second year students

ಎಸ್‌.ಎಸ್‌.ಎಲ್‌.ಸಿ ಹಾಗೂ ಪಿಯುಸಿ ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 

ಹೊಸಪೇಟೆ 13: ಇಂದು ವಿಜಯನಗರ ಕ್ಷೇತ್ರದ ಹೊಸಪೇಟೆಯ ಅಂಜುಮನ್ ಶಾದಿಮಹಲ್ ಆವರಣದಲ್ಲಿ ಅಂಜುಮನ್ ಖಿದ್ಮತೆ ಇಸ್ಲಾಂ  ಕಮಿಟಿಯ ಹೊಸಪೇಟೆ ವತಿಯಿಂದ 2024-25 ಸಾಲಿನ ಎಸ್‌.ಎಸ್‌.ಎಲ್‌.ಸಿ ಹಾಗೂ ಪಿಯುಸಿ ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೊಸಪೇಟೆ ಅಂಜುಮನ್ ಖಿದ್ಮತೆ ಇಸ್ಲಾಂ ಕಮಿಟಿಯ ಅಧ್ಯಕ್ಷರು ಹಾಗು ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಹೆಚ್‌. ಎನ್‌. ಮೊಹಮ್ಮದ್ ಇಮಾಮ್ ನಿಯಾಜಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಚೆನ್ನಾಗಿ ಓದಿ ಉತ್ತಮ ಅಂಕಗಳನ್ನು ಎಲ್ಲಾ ಪ್ರತಿಭಾವಂತ ವಿಧ್ಯಾರ್ಥಿ ಹಾಗು ವಿಧ್ಯಾರ್ಥಿನಿಯರಿಗೆ ಹಾಗು ಸಹಕಾರ ನೀಡಿದ ಎಲ್ಲಾ ಪೋಷಕರಿಗೂ ಹೃದಯಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.  

ಜೀವನದಲ್ಲಿ ಅಂಕಗಳೇ ಅಂತಿಮ ಅಲ್ಲ, ಅಂಕಗಳು ಹಾಗು ಪುರಸ್ಕಾರಗಳ ಜೊತೆಗೆ ಮಕ್ಕಳು ತಮ್ಮ ಪ್ರತಿಭೆಯನ್ನು ಅನಾವರಣಗೊಸಬೇಕು. ಇಂದು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರ ಸಾಕಷ್ಟ ಸೌಲಭ್ಯಗಳನ್ನು ಒದಗಿಸಿದೆ ಅದನ್ನು ಮಕ್ಕಳು ಸದುಪಯೋಗ ಪಡಿಸಿಕೊಂಡು ಶಿಕ್ಷಣವನ್ನು ಪೂರ್ತಿಗೊಳಿಸಬೇಕು ಯಾವುದೇ ಕಾರಣಕ್ಕೂ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಬಾರದು. ಉತ್ತಮ ಸುಶಿಕ್ಷಕರಾಗಿ ಉತ್ತಮ ನಾಗರಿಕರಾಗಿ ರಾಜ್ಯದ ಅಭಿವೃದ್ಧಿಗೆ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾಗ ಬೇಕಾಗಿರುತ್ತದೆ. ಹಾಗೂ ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬ ನಾಣ್ಣುಡಿಯಂತೆ ಮಕ್ಕಳ ಒಳಗಿರುವ ಪ್ರತಿಭೆಯನ್ನು ಪಾಲಕರು ಪೋಷಕರು ಮತ್ತು ಶಿಕ್ಷಕರು ಗುರುತಿಸಿದಲ್ಲಿ ಮಾತ್ರ ಸಾರ್ಥಕವಾಗುತ್ತದೆ.  

ವಿಶೇಷವಾಗಿ ವಿದ್ಯಾರ್ಥಿಗಳು ಸಹ ಅನಾವಶ್ಯಕ ಸಮಯವನ್ನ ವ್ಯರ್ಥ ಮಾಡದೆ ಮೊಬೈಲ್ ಗಳಿಗೆ ಅಡಿಕ್ಟ್‌ ಆಗದೆ ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ದಿನನಿತ್ಯದ ಹವ್ಯಾಸಗಳನ್ನು ರೂಪಿಸಿಕೊಳ್ಳಬೇಕು ಆಟ ಪಾಠ ಕ್ರೀಡೆಗಳಲ್ಲಿ ಹೆಸರು ಮಾಡಿ ಜನ್ಮ ಕೊಟ್ಟ ತಂದೆ ತಾಯಿಗಳಿಗೂ ಹಾಗೂ ಪಾಲಕರಿಗೂ ಪೋಷಕರಿಗೂ ನಿದ್ದೆ ಕಳಿಸಿದ ಶಿಕ್ಷಕರಿಗೂ ಗೌರವ ತರುವಂತ ಕೆಲಸ ಮಾಡಬೇಕೆಂದು ತಿಳುವಳಿಕೆ ಹೇಳಿದರು.   

ಇದೇ ಸಂಧರ್ಭದಲ್ಲಿ ಅಂಜುಮನ್ ಖಿದ್ಮತೆ ಇಸ್ಲಾಂ ಕಮಿಟಿಯ ಉಪಾಧ್ಯಕ್ಷರಾದ ಫೈರೋಜ್ ಖಾನ್‌. ಖಜಾಂಚಿಗಳಾದ ಅನ್ಸರ್ ಬಾಷ. ಜಂಟಿ ಕಾರ್ಯದರ್ಶಿಗಳಾದ ಡಾಽಽ ದುರ್ವೇಶ್ ಮುಯೂದ್ದೀನ್  ಅಂಜುಮನ್ ಖಿದ್ಮತೆ ಇಸ್ಲಾಂ ಕಮಿಟಿಯ ಸದ್ಯಸರುಗಳು ಹಾಗು ಎಮ್ ಡಿ ಸಿರಾಜ್ ಸಾಬ್, ಹೆಚ್‌. ಎನ್‌. ಎಫ್ ಅಲಿ ಬಾಬು ನಿಯಾಜಿ, ಅಬ್ದುಲ್ ಖಾದರ್ ರಫಾಯಿ ಹಾಗೂ ಮಾಜಿ ನಗರಸಭಾ ಸದಸ್ಯರುಗಳಾದ ಅಬ್ದುಲ್ ಖದೀರ್ ಸಾಬ್, ಶೆಕ್ಷಾವಲಿ, ಕೆ.ಎಂ.ಕೆ ರಿಯಾಜ್, ಫೈರೋಜ್ ಪೀರಾ, ಟಿಂಕರ್ ರಫೀಕ್, ಅಜೀಮ್ ಬೇಗ್, ಆರೀಫಾ ಮೇಡಮ್, ಮುಸ್ತಾಫಾ ಮೆಹಮೂದ್, ಹಾಗು ಸಮಾಜದ ಹಿರಿಯ ಮುಖಂಡರು ಹಾಗೂ ಪಾಲಕರು ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದರು.