ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಾಸಕ್ಕೆ ಪ್ರತಿಭಾ ಕಾರಂಜಿ ಸಹಕಾರಿ
Talent fountain is helpful for competitive spirit, knowledge development
ಕಂಪ್ಲಿ 17 :ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಹೊರ ಹೊಮ್ಮಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಯಕರ ಮಾಯಮ್ಮ ಹೇಳಿದರು ತಾಲೂಕಿನ ದೇವಸಮುದ್ರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆವರಣದಲ್ಲಿ ಬುಧುವಾರ ಹಮ್ಮಿಕೊಂಡಿದ್ದ ದೇವಸಮುದ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲ್ಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಸವಾಂರ್ಗೀಣ ಅಭಿವೃದ್ದಿಗಾಗಿ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಪಠ್ಯೇತರ ಚಟವಟಿಕೆ ಮೂಲಕ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಯುತ್ತದೆ ಎಂದರು. ನಂತರ ದೇವಸಮುದ್ರ ಸಿ.ಆರ್.ಪಿ ಕರುಣಕರ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಾಸಕ್ಕೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಪ್ರತಿ ಮಕ್ಕಳಲ್ಲಿ ಒಂದು ವಿಶೇಷ ಪ್ರತಿಭೆ ಇರುತ್ತದೆ.
ಅದರ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಕಲಿಕೆ ಎಂದರೆ ಕೇವಲ ಅಂಕಗಳಿಕೆ ಅಲ್ಲ, ಕಲಿಕೆ ಜೊತೆ ವಿವಿಧ ಚಟುವಟಿಕೆ ಮೂಲಕ ಮಕ್ಕಳ ಪ್ರತಿಭೆ ಪ್ರತಿಭಾ ಕಾರಂಜಿ ಅನುಕೂಲ ವಾಗುತ್ತದೆ ಎಂದರು. 11 ಶಾಲೆಗಳು 45 ಸ್ಪರ್ಧೆಗಳು ಜೊತೆಗೆ ಛದ್ಮವೇಷದ ವೈಯಕ್ತಿಕ ಮತ್ತು ಸಾಮೂಹಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ನಾಯಕರ ಯಂಕೋಬ ಕೃಷ್ಣಪ ಸ್ಥಾಪಿತ ಡಿ.ಎಸ್.ಎಸ್ ಕಂಪ್ಲಿ ತಾಲೂಕು ಸಂಚಾಲಕ ಗುಂಡಪ್ಪ ಮುಖ್ಯಗುರು ಹೆಚ್.ದೊಡ್ಡಬಸಪ್ಪ ನಿರೂಪಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಸುನಿತಾ, ಇಸಿಒ ರೇವಣ್ಣ, ಸಿಅರ್ರ್ಿಗಳಾದ ಭೂಮೇಶ್ವರ, ಗಂಗಾಧರ, ಷಾಮಿಯ ಚಂದ ಉಪ ಪ್ರಾಚಾರ್ಯೆ ಸುಜಾತ, ಎಸ್ ಡಿ.ಎಂ ಸಿ ಅಧ್ಯಕ್ಷ ಹನುಮೇಶ, ಸದಸ್ಯ ಯರ್ರಿಸ್ವಾಮಿ, ಜಿಪಿಟಿ ಸಂಘದ ಅಧ್ಯಕ್ಷ ಮಂಜುನಾಥ, ಮುಖ್ಯಗುರುಗಳಾದ ಮಲ್ಲಿಕಾರ್ಜುನ, ನಾಗಪ್ಪ, ಪಾಟೇಲ್, ಜಡೆಪ್ಪ ಪಂಪನಗೌಡ ಮುಖಂಡರಾದ ಹೆಚ್. ಗುಂಡಪ್ಪ, ರುದ್ರಗೌಡ, ಆನಂದ, ವೆಂಕನಗೌಡ, ನಾಗರಾಜ ಪಂಪಾಪತಿ ಸೇರಿದಂತೆ ಎಲ್ಲಾ ಶಾಲೆಯ ಮಕ್ಕಳು ಪಾಲ್ಗೋಂಡಿದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 