ಗುರು ಪೂರ್ಣಿಮಾ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಗುರು ಪೂರ್ಣಿಮಾ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ Talented students felicitated at Guru Purnima function

ಲೋಕದರ್ಶನ ವರದಿ 

   ಸಿಂದಗಿ 31 : ಗುರು-ಶಿಷ್ಯರ ಸಂಬಂಧವು ಭಾರತೀಯ ಸಂಸ್ಕೃತಿಯ ಜೀವಾಳವಾಗಿದೆ. ಗುರುಗಳು ಕೇವಲ ಶಿಕ್ಷಣ ನೀಡುವವರಲ್ಲ, ಉತ್ತಮ ವ್ಯಕ್ತಿತ್ವ ರೂಪಿಸುವ ಶಿಲ್ಪಿಗಳಾಗಿದ್ದಾರೆ ಎಂದು ಯಂಕಂಚಿ  ಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು. 

 ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಗುರು ಪೂರ್ಣಿಮೆಯ ಅಂಗವಾಗಿ ಹಮ್ಮಿಕೊಂಡಿದ್ದ ಗುರು ಪೂರ್ಣಿಮಾ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಗುರುಗಳ ಮಾರ್ಗದರ್ಶನವನ್ನು ಗೌರವಿಸಿ ಶಿಸ್ತು, ಸಂಸ್ಕಾರ ಮತ್ತು ಪರಿಶ್ರಮದ ಮೂಲಕ ಉನ್ನತ ಸಾಧನೆ ಮಾಡಬೇಕು. ಇಂದಿನ ಸನ್ಮಾನವು ವಿದ್ಯಾರ್ಥಿಗಳಿಗೆ ಮತ್ತಷ್ಟು ಸಾಧನೆಗೆ ಪ್ರೇರಣೆಯಾಗಲಿ ಎಂದರು. 

 ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಮಾರಂಭದಲ್ಲಿ ಶ್ರೀಶೈಲ ಹದಗಲ, ಸಂಗು ಹದಗಲ, ನಾಗೇಶ ಮಜ್ಜಗಿ, ಸುರೇಶ ಕಂಬಾರ, ಶ್ರೀಶೈಲ ಜಾಲವಾದಿ ಸೇರಿದಂತೆ ಗ್ರಾಮಸ್ಥರು, ಪಾಲಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.