ಗುರು ಪೂರ್ಣಿಮಾ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
Talented students felicitated at Guru Purnima function
ಲೋಕದರ್ಶನ ವರದಿ
ಸಿಂದಗಿ 31 : ಗುರು-ಶಿಷ್ಯರ ಸಂಬಂಧವು ಭಾರತೀಯ ಸಂಸ್ಕೃತಿಯ ಜೀವಾಳವಾಗಿದೆ. ಗುರುಗಳು ಕೇವಲ ಶಿಕ್ಷಣ ನೀಡುವವರಲ್ಲ, ಉತ್ತಮ ವ್ಯಕ್ತಿತ್ವ ರೂಪಿಸುವ ಶಿಲ್ಪಿಗಳಾಗಿದ್ದಾರೆ ಎಂದು ಯಂಕಂಚಿ ಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.
ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಗುರು ಪೂರ್ಣಿಮೆಯ ಅಂಗವಾಗಿ ಹಮ್ಮಿಕೊಂಡಿದ್ದ ಗುರು ಪೂರ್ಣಿಮಾ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಗುರುಗಳ ಮಾರ್ಗದರ್ಶನವನ್ನು ಗೌರವಿಸಿ ಶಿಸ್ತು, ಸಂಸ್ಕಾರ ಮತ್ತು ಪರಿಶ್ರಮದ ಮೂಲಕ ಉನ್ನತ ಸಾಧನೆ ಮಾಡಬೇಕು. ಇಂದಿನ ಸನ್ಮಾನವು ವಿದ್ಯಾರ್ಥಿಗಳಿಗೆ ಮತ್ತಷ್ಟು ಸಾಧನೆಗೆ ಪ್ರೇರಣೆಯಾಗಲಿ ಎಂದರು.
ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಮಾರಂಭದಲ್ಲಿ ಶ್ರೀಶೈಲ ಹದಗಲ, ಸಂಗು ಹದಗಲ, ನಾಗೇಶ ಮಜ್ಜಗಿ, ಸುರೇಶ ಕಂಬಾರ, ಶ್ರೀಶೈಲ ಜಾಲವಾದಿ ಸೇರಿದಂತೆ ಗ್ರಾಮಸ್ಥರು, ಪಾಲಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 