ಗುರು ಪೂರ್ಣಿಮೆ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
Talented students felicitated on the occasion of Guru Purnima
ಶಿಗ್ಗಾವಿ 02 : ಪಟ್ಟಣದ ಜಯನಗರದ ವಿನಾಯಕ ದೇವಸ್ಥಾನದಲ್ಲಿ ನಟರಾಜ ನೃತ್ಯ ಶಾಲೆಯ ವತಿಯಿಂದ ಗುರು ಪೂರ್ಣಿಮೆ ಅಂಗವಾಗಿ ಗುರು ವಂದನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಗಂಧರ್ವ ಮಹಾವಿದ್ಯಾಲಯದ ನೃತ್ಯ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೃತ್ಯ ಗುರು ಸಾಯಿಬಾಬಾ ಕಾಮನಹಳ್ಳಿ ಅವರು ಅಂಕಪಟ್ಟಿ ವಿತರಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನೃತ್ಯ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ, ಶಾಲೆ ಹಾಗೂ ಪೋಷಕರಿಗೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಶಾಲಿನಿ ಕಾಮನಹಳ್ಳಿ, ಸುಜಾತಾ ಮಲ್ಲಾಪುರ, ಪೂರ್ಣಿಮಾ ಪ್ರದೀಪ್, ರಾಧಾ ಕಾಳೆ ಸೇರಿದಂತೆ ನೃತ್ಯ ಶಾಲೆಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಕಲಾಭಿಮಾನಿಗಳು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 