ಸಾವಳಗಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜೂನ್ 14ರಂದು ಸನ್ಮಾನ
Talented students in Savalagi to be felicitated on June 14
ಜಮಖಂಡಿ 13: ತಾಲೂಕಿನ ಸಾವಳಗಿ ಗ್ರಾಮದ ಸು-ಸಂಸ್ಕಾರ ಸೇವಾ ಮಂಚದ ಸಹಯೋಗದಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜೂನ್ 14ರಂದು ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಬೆಳಿಗ್ಗೆ 9 ಗಂಟೆಗೆ ತಕ್ಕೋಡ ಕ್ರಾಸ್ ಬಳಿಯ ಸಿದ್ದನಗೌಡ ಪಾಟೀಲ ಫಾರ್ಮ್ ಹೌಸ್ನಲ್ಲಿ ನಡೆಯಲಿದೆ ಎಂದು ಮಂಚದ ಅಧ್ಯಕ್ಷ ಪಂಡಿತ ಪಾಶ್ವನಾಥ ಉಪಾಧ್ಯೆ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಓಲೇಮಠದ ಆನಂದ ದೇವರು ಸಾನ್ನಿಧ್ಯ ವಹಿಸಲಿದ್ದು, ಮಾಜಿ ಶಾಸಕ ಆನಂದ ನ್ಯಾಮಗೌಡ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಮಾಜಿ ಜಿಪಂ ಉಪಾಧ್ಯಕ್ಷ ಸುಶೀಲಕುಮಾರ ಬೆಳಗಲಿ, ಉಮೇಶ ಮಹಾಬಳಶೆಟ್ಟಿ, ಗುರುಲಿಂಗ ಅಂಗಡಿ, ಬಸವರಾಜ ಸಿಂಧೂರ, ವರ್ಧಮಾನ ನ್ಯಾಮಗೌಡ, ರಾಹುಲ್ ಕಲ್ಲೂತಿ, ಸಮೀರ್ ಕಂಗೊಳ್ಳಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 