ತಾಳಿಕೋಟೆ: ಸರ್ವಜ್ಞ ವಿದ್ಯಾಪೀಠದಲ್ಲಿ ಹೆಚ್ಪಿವಿ ಲಸಿಕಾ ಕಾರ್ಯಕ್ರಮ

ತಾಳಿಕೋಟೆ: ಸರ್ವಜ್ಞ ವಿದ್ಯಾಪೀಠದಲ್ಲಿ ಹೆಚ್ಪಿವಿ ಲಸಿಕಾ ಕಾರ್ಯಕ್ರಮ  Talikote: HPV vaccination program at Sarvajna Vidyapeetha

ತಾಳಿಕೋಟೆ, ಜು.08: ಪಟ್ಟಣದ ಸರ್ವಜ್ಞ ವಿದ್ಯಾಪೀಠದಲ್ಲಿ 14 ರಿಂದ 15 ವರ್ಷದ ವಿದ್ಯಾರ್ಥಿನಿಯರಿಗೆ ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಲಸಿಕಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಯಿತು.  

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸುರಕ್ಷಿತ ಹಾಗೂ ಪರಿಣಾಮಕಾರಿ ಎಂದು ಪರಿಗಣಿಸಲ್ಪಡುವ ಈ ಲಸಿಕೆಯನ್ನು ಅರ್ಹ ವಿದ್ಯಾರ್ಥಿನಿಯರಿಗೆ ನೀಡಲಾಯಿತು.  ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಭಾಗವಹಿಸಿ ಲಸಿಕೆಯ ಮಹತ್ವದ ಕುರಿತು ಮಾಹಿತಿ ನೀಡಿದರು.  

ಈ ಸಂದರ್ಭದಲ್ಲಿ ಮಧು ಟಕ್ಕಳಕಿ, ನೂರಜಾನ್ ಬೋರಗಿ, ವಿದ್ಯಾವತಿ ಬೂದಿಹಾಳ, ಆಶಾ ಕಾರ್ಯಕರ್ತೆಯರು, ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಬಿ. ಮಂಗಳೂರು, ಮುಖ್ಯಗುರುಗಳಾದ ಸಂತೋಷ ಪವಾರ್, ಶಾಂತಗೌಡ ಬಿರಾದಾರ, ಚೇತನ ನಾವದಗಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.